Advertisement
ಆರೋಪಿಗಳಾದ ಪ್ರಮೋದ್ ಉಜಿರೆ ಹಾಗೂ ಶಶಿರಾಜ್ ಶೆಟ್ಟಿ (35) ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಈ ಪೈಕಿ ಶಶಿರಾಜ್ ಶೆಟ್ಟಿ ಅವರನ್ನು ಬಂಧಿಸಲಾಗಿದೆ. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮತ್ತೋರ್ವ ಪರಾರಿಯಾಗಿದ್ದಾರೆ.
Related Articles
ಬಂಧಿತ ಪ್ರಮುಖ ಆರೋಪಿ ಹಾಗೂ ಬೆಳ್ತಂಗಡಿ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಶಶಿರಾಜ್ ಪರ ಶಾಸಕ ಹರೀಶ್ ಪೂಂಜ ಹಾಗೂ ಇತರ ಕೆಲವರು ಆರೋಪಿಯನ್ನು ಕಾನೂನು ಬಾಹಿರವಾಗಿ ಬಿಡುಗಡೆ ಮಾಡುವಂತೆ ಠಾಣಾಧಿಕಾರಿಗಳಿಗೆ ಒತ್ತಡ ಹಾಕಿ, ಅವಾಚ್ಯವಾಗಿ ಬೈದು ಬೆದರಿಸಿರುತ್ತಾರೆ. ಅವರು ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ, ಪೊಲೀಸ್ ಇಲಾಖೆ ಬಗ್ಗೆ ಅಸಾಂವಿಧಾನಿಕ ಶಬ್ದಗಳಲ್ಲಿ ಮಾತನಾಡಿ, ದುರ್ವರ್ತನೆ ತೋರಿರುತ್ತಾರೆ ಎಂದು ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಠಾಣೆಯಲ್ಲಿ ಮಧ್ಯರಾತ್ರಿ ಶಾಸಕ ಪೂಂಜ ಪ್ರತಿಭಟನೆಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ಕಾರ್ಯಕರ್ತ ಶಶಿರಾಜ್ ಶೆಟ್ಟಿಯನ್ನು ಪೊಲೀಸರು ವಿನಾಕಾರಣ ಬಂಧಿಸಿದ್ದಾರೆ. ಪೊಲೀಸರ ಕಾಂಗ್ರೆಸ್ ಏಜಂಟರಂತೆ ವರ್ತಿಸಿದ್ದಾರೆ. ಯಾವುದೇ ದಾಖಲೆಯಿಲ್ಲದೆ ಪತ್ನಿ ಮಕ್ಕಳು, ಮನೆಮಂದಿ ಎದುರೇ ರಾತೋರಾತ್ರಿ ಬಂಧಿಸಿ ದರ್ಪ ತೊರಲಾಗಿದೆ. ಇದು ವ್ಯವಸ್ಥಿತ ಷಡ್ಯಂತ್ರ ಎಂದು ಆರೋಪಿಸಿ ಶಾಸಕ ಹರೀಶ್ ಪೂಂಜ ಅವರು ಮಧ್ಯರಾತ್ರಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಆಗಮಿಸಿ ಪ್ರತಿಭಟನೆ ನಡೆಸಿದ್ದರು. ಬೆಳಗ್ಗೆ 5 ಗಂಟೆ ವರೆಗೂ ಕಾರ್ಯಕರ್ತರೊಂದಿಗೆ ಪ್ರತಿಭಟನೆ ನಡೆಸಿದ್ದಲ್ಲದೆ, ಪೊಲೀಸರ ಜತೆ ವಾಗ್ವಾದ ನಡೆಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.