Advertisement

Belthangady ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿದಾತನ ಬಂಧನ

09:15 PM Sep 16, 2023 | Team Udayavani |

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಕಕ್ಕಿಂಜೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿದ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.

Advertisement

ಚಿಬಿದ್ರೆ ನಿವಾಸಿ ಮಹಮ್ಮದ್‌ ನಿಫಾಲ್‌ (25) ಬಂಧಿತ ಆರೋಪಿ.

ಧರ್ಮಸ್ಥಳ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆ ನಡೆಸಿದಾಗ ಗಾಂಜಾ ಸೇವಿಸಿರುವುದು ದೃಢ ಪಟ್ಟಿದೆ. ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next