Advertisement

ಬೆಳ್ತಂಗಡಿ: ಆಡು ಮೇಯಿಸಲು ಹೋದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಬಂಧನ

03:40 PM Aug 29, 2020 | Mithun PG |

ಬೆಳ್ತಂಗಡಿ: ಉಜಿರೆ ಗ್ರಾಮದ ನಿನ್ನಿಕಲ್ಲು ಬಳಿ ಸ್ಥಳೀಯ 23 ವರ್ಷದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಆ.29ರಂದು ನಡೆದಿದೆ ಎಂದು ವರದಿಯಾಗಿದೆ.

Advertisement

ಆಡು ಮೇಯಿಸಲು ಹೋಗಿದ್ದ ಯುವತಿ ಬಳಿ ಬಂದ ಮಾಚಾರು ನಿವಾಸಿ ಸಾಧಿಕ್ (27) ಎಂಬಾತ ಯುವತಿ ಕೈ ಎಳೆದು ಬಲತ್ಕಾರಕ್ಕೆ ಯತ್ನಿಸಿದ್ದಾನೆ.  ಈ ವೇಳೆ ಯುವತಿ ಕಿರುಚಾಡಿದ್ದರಿಂದ ರಸ್ತೆಯಲ್ಲಿ ಹೋಗುತ್ತಿದ್ದ ಸ್ಥಳೀಯರು ಬಂದು ಆಕೆಯನ್ನು ರಕ್ಷಣೆ ಮಾಡಿದ್ದಾರೆ.

ಆತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಸ್ಥಳೀಯರು ಹಿಡಿದು ಬೆಳ್ತಂಗಡಿ ಪೊಲೀಸರಿಗೊಪ್ಪಿಸಿದ್ದಾರೆ.

ಯುವತಿಯ ಸಂಬಂಧಿಕರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್ಐಆರ್ ಕೂಡ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next