Advertisement

Belthangady: ಅಪಘಾತದಲ್ಲಿ ದ್ವಿಚಕ್ರ ಸವಾರನಿಗೆ ಗಾಯ

08:58 PM Oct 28, 2024 | Team Udayavani |

ಬೆಳ್ತಂಗಡಿ: ತಾಲೂಕು ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಎಂಬಲ್ಲಿ ಎರಡು ದ್ವಿಚಕ್ರ ವಾಹನ ಅಪಘಾತದಲ್ಲಿ ದ್ವಿಚಕ್ರ ಸವಾರ ಗಾಯಗೊಂಡ ಘಟನೆ ನಡೆದಿದೆ.

Advertisement

ಮಹಮ್ಮದ್‌ ರಫೀಕ್‌ ಎಂಬವರು ಸವಾರನಾಗಿ ಹಾಗೂ ಇಸಾಕ್‌ (27) ಅವರನ್ನು ಸಹಸವಾರನನ್ನಾಗಿ ಕುಳ್ಳಿರಿಸಿಕೊಂಡು ಮದ್ದಡ್ಕ ಕಡೆಯಿಂದ ಗುರುವಾಯನಕೆರೆ ಕಡೆಗೆ ಬರುತ್ತಿರುವಾಗ ಎದುರು ಬದಿಯಿಂದ ಬಂದ ದ್ವಿಚಕ್ರ ವಾಹನ ಸವಾರ ದುಡುಕುತನದಿಂದ ಚಲಾಯಿಸಿದ ಪರಿಣಾಮ, ರಫೀಕ್‌ ಹಾಗೂ ಇಸಾಕ್‌ ಇಬ್ಬರು ರಸ್ತೆಗೆ ಬಿದ್ದ ಪರಿಣಾಮ ಸವಾರನಿಗೆ ಸಣ್ಣ ಪುಟ್ಟ ಗಾಯಗಳಾಗಿದೆ.

ಸಹಸವಾರನಾದ ಇಸಾಕ್‌ ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಯ ಬಗ್ಗೆ ಮಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next