Advertisement

Belthangady: ತೋಡಿನಲ್ಲಿ ಕೊಚ್ಚಿ ಹೋಗಿದ್ದ ಮಹಿಳೆ ಶವ ಪತ್ತೆ

01:20 AM Jul 23, 2024 | Team Udayavani |

ಬೆಳ್ತಂಗಡಿ: ಇಂದಬೆಟ್ಟು ಗ್ರಾಮದ ಬಂಗಾಡಿಯಲ್ಲಿ ಮನೆಯಿಂದ ರವಿವಾರ ಅಂಗಡಿಗೆಂದು ಹೋಗಿ ನಾಪತ್ತೆಯಾಗಿದ್ದ ಮಹಿಳೆಯ ಮೃತದೇಹ ಸೋಮವಾರ ಪಕ್ಕದ ತೋಡಿನಲ್ಲಿ ಪತ್ತೆಯಾಗಿದೆ.

Advertisement

ಬೆದ್ರಬಟ್ಟು ನಿವಾಸಿ ಬಾಬು ಮಡಿವಾಳ ಅವರ ಪತ್ನಿ ಮೋಹಿನಿ (60) ಅವರು ತೋಡಿಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೀಗಿ ಮೃತಪಟ್ಟವರು. ರವಿವಾರ ಸಂಜೆ ಕೂಲಿ ಕೆಲಸ ಮುಗಿಸಿ ಅಂಗಡಿಗೆ ಹೋದವರು ಮನೆಗೆ ಹಿಂದಿರುಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆಯವರು ಹುಡುಕಾಡಿದ್ದು, ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ. ಸೋಮವಾರ ಬಂಗಾಡಿ ಸಹಸ್ರ ನಾಗಬನ ದೇವಸ್ಥಾನ ಬಳಿ ಹುಡುಕಾಟ ನಡೆಸಿದಾಗ ಮೃತದೇಹ ಪತ್ತೆಯಾಗಿದೆ.

ಮೋಹಿನಿ ಅವರು ಅಂಗಡಿಗೆ ಹೋಗುವ ದಾರಿ ಮಧ್ಯೆ ಬೆದ್ರಬೆಟ್ಟು ಬಳಿ ತೋಡು ದಾಟಿ ಹೋಗಬೇಕಾಗಿತ್ತು. ಭಾರೀ ಮಳೆಯ ಪರಿಣಾಮ ತೋಡು ತುಂಬಿ ಹರಿಯುತ್ತಿತ್ತು. ತೋಡು ದಾಟುವಾಗ ಅವರು ನೀರಿಗೆ ಬಿದ್ದಿದ್ದು, ಸುಮಾರು ಎರಡು ಕಿ.ಮೀ. ದೂರದವರೆಗೆ ಕೊಚ್ಚಿಕೊಂಡು ಹೋಗಿ ಸಹಸ್ರ ನಾಗಬನದ ಬಳಿ ಮೃತದೇಹ ಸಿಲುಕಿಕೊಂಡಿತ್ತು.

ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣ ತಂಡದ ಸಹಕಾರದೊಂದಿಗೆ ಮೃತದೇಹವನ್ನು ನದಿಯಿಂದ ಮೇಲೆಕ್ಕೆತ್ತಲಾಯಿತು. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next