Advertisement

Belthangady ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಆತಂಕದಲ್ಲಿ: ಕೋಟ

12:14 AM May 21, 2024 | Team Udayavani |

ಬೆಳ್ತಂಗಡಿ: ಯಾವುದೇ ವ್ಯವಹಾರದಲ್ಲಿ ಕಾಂಗ್ರೆಸ್‌, ಬಿಜೆಪಿ ಎಂದಿಲ್ಲ. ತಪ್ಪು ಯಾರು ಮಾಡಿದರೂ ತಪ್ಪೇ. ಆದರೆ ರಾಜಕೀಯ ದ್ವೇಷಕ್ಕಾಗಿ ಬಿಜೆಪಿ ಮುಖಂಡನನ್ನು ಬಂಧಿಸಲು ಕಾಂಗ್ರೆಸ್‌ ಕಾನೂನನ್ನು ಬಳಸಿರುವುದು ಶಿಕ್ಷಾರ್ಹ. ಇದನ್ನು ಪ್ರಶ್ನಿಸಿ ಜನಪ್ರತಿನಿಧಿ ಪ್ರತಿಭಟಿಸಿದರೆ ಅವರ ಮೇಲೆಯೇ ಕೇಸು ಹಾಕುವ ಮೂಲಕ ಕಾಂಗ್ರೆಸ್‌ ಕೆಟ್ಟ ಪರಂಪರೆಗೆ ಕೈ ಹಾಕಿದೆ ಎಂದು ವಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

Advertisement

ಮೇಲಂತಬೆಟ್ಟು ಗ್ರಾಮದ ಮೂಡಲ ದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ತಹಶೀಲ್ದಾರ್‌ ಹಾಗೂ ಪೊಲೀಸರ ಸಮ್ಮುಖದಲ್ಲಿ ಮೇ 18ರಂದು ನಡೆದ ದಾಳಿಗೆ ಸಂಬಂಧಿಸಿ ಬಿಜೆಪಿ ಮುಖಂಡ ಶಶಿರಾಜ್‌ ಶೆಟ್ಟಿ ಅವರನ್ನು ಉದ್ದೇಶಪೂರ್ವಕವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಸೋಮವಾರ ತಾಲೂಕು ಆಡಳಿತ ಸೌಧ ಮುಂಭಾಗ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಸಾಮಾಜಿಕ ವ್ಯವಸ್ಥೆಯಡಿ ಶಾಸಕರ ಮೇಲೆ ಪ್ರಕರಣ ದಾಖಲಿಸುತ್ತೀರಿ ಎಂದಾದರೆ ಕರ್ನಾಟಕವನ್ನು ಜೈಲಾಗಿ ಮಾಡಲು ಹೊರಟ್ಟಿದ್ದೀರಿ ಎಂಬುದು ಸ್ಪಷ್ಟವಾಗಿದೆ. 24 ಗಂಟೆ ಕಾಲಾವಕಾಶ ನೀಡುತ್ತೇವೆ. ಬಿಜೆಪಿ ಮುಖಂಡನ ಮೇಲೆ ಹಾಗೂ ಶಾಸಕರ ಮೇಲೆ ಅನಧಿಕೃತವಾಗಿ ಹಾಕಿದ ಕೇಸನ್ನು ತತ್‌ಕ್ಷಣ ಹಿಂಪಡೆಯಬೇಕು ಇಲ್ಲವಾದಲ್ಲಿ ಪ್ರತಿಭಟನೆ ರಾಜ್ಯಕ್ಕೆ ತಲುಪಲಿದೆ ಎಂದು ಎಚ್ಚರಿಸಿದರು.

ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ| ಬ್ರಿಜೇಶ್‌ ಚೌಟ ಮಾತನಾಡಿ, ರಾಜ ಧರ್ಮದಲ್ಲಿ ನ್ಯಾಯ ಒದಗಿಸಬೇಕು ಎಂದು ವಿನಂತಿಸುತ್ತಿದ್ದೇವೆ ಎಂದರು.

ಹಫ್ತಾ ನೀಡದ್ದಕ್ಕೆ ಕೇಸು: ಶಾಸಕ ಹರೀಶ್‌ ಪೂಂಜ ಮಾತನಾಡಿ, ಹಿಂದೆ ಮಾಜಿ ಶಾಸಕ ಕೆ. ವಸಂತ ಬಂಗೇರರು ಪೊಲೀಸರಿಗೆ ಕೊಟ್ಟ ಬೈಗುಳವನ್ನು ಒಪ್ಪಿಕೊಂಡು ಮೌನವಾಗಿದ್ದರು. ಆದರೆ ನಾನು ಇಂದು ನಿರಪರಾಧಿಯನ್ನು ಅಪರಾಧಿಯಾಗಿ ಪ್ರಕರಣ ದಾಖಲಿಸಿ ದ್ದನ್ನು ಪ್ರಶ್ನಿಸಿದ್ದಕ್ಕೆ ನನ್ನ ಮೇಲೆ ಪ್ರಕರಣ
ದಾಖಲಿಸಲಾಗಿದೆ. ಇಲ್ಲಿ ಅಧಿಕಾರಿಗಳಿಗೆ ಹಫ್ತಾ ನೀಡದ್ದಕ್ಕೆ ಪ್ರಕರಣ ದಾಖಲಿಸ ಲಾಗಿದೆ.

Advertisement

ಬೆಳ್ತಂಗಡಿಯಲ್ಲಿ ದ್ವೇಷ ರಾಜಕಾರಣ ಇರಲಿಲ್ಲ. ಬೆಂಗಳೂರಿನಿಂದ ಬಂದವರಿಂದ ಆರಂಭವಾಗಿದೆ ಎಂದರು. ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬೆಳ್ತಂಗಡಿ ಚುನಾವಣಾ ಪ್ರಭಾರಿ ಹರಿಕೃಷ್ಣ ಬಂಟ್ವಾಳ ಮಾತನಾಡಿದರು.

ಜಿಲ್ಲಾ ಉಪಾಧ್ಯಕ್ಷ ಜಯಂತ್‌ ಕೋಟ್ಯಾನ್‌, ಮಂಡಲ ಅಧ್ಯಕ್ಷ ಶ್ರೀನಿವಾಸ್‌ ರಾವ್‌, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ನಂದನ್‌ ಮಲ್ಯ, ಮಹಿಳಾ ಮೋರ್ಚಾ ಅಧ್ಯಕ್ಷೆ ಮಂಜುಳಾ ರಾವ್‌, ಉಡುಪಿ ಅಧ್ಯಕ್ಷ ಪೃಥ್ವಿರಾಜ್‌ ಶೆಟ್ಟಿ ಭಾಗವಹಿಸಿದರು.

ಲಾೖಲ ವೃತ್ತದಿಂದ ನೂರಾರು ಕಾರ್ಯಕರ್ತರು ತಹಶೀಲ್ದಾರ್‌ ಕಚೇರಿ ವರೆಗೆ ಕಾಲ್ನಡಿಗೆ ಜಾಥಾ ನಡೆಸಿದರು.

Advertisement

Udayavani is now on Telegram. Click here to join our channel and stay updated with the latest news.

Next