Advertisement

ಕೇಂದ್ರ ಸರಕಾರದ ಯೋಜನೆ ಯಶಸ್ವಿ ಅನುಷ್ಠಾನ: ಮೀನಾಕ್ಷಿ 

09:11 AM Feb 17, 2019 | Team Udayavani |

ಬೆಟ್ಟಂಪಾಡಿ: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳು ಗ್ರಾಮ ಮಟ್ಟದಲ್ಲಿ ಅನುಷ್ಠಾನಗೊಳ್ಳುತ್ತಿದೆ. ವಿಶ್ವ ಮಟ್ಟದಲ್ಲಿ ಗುರುತಿಸುವ ಕೆಲಸ ದೇಶದ ಪ್ರಧಾನ ಮಂತ್ರಿ ಮೋದಿಯವರಿಂದ ಆಗುತ್ತಿದೆ ಎಂದು ಜಿ.ಪಂ. ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದರು. ಬೆಟ್ಟಂಪಾಡಿ ಗ್ರಾ.ಪಂ. ಸಭಾಭವನದಲ್ಲಿ ಶನಿವಾರ ನಡೆದ ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಉಜ್ಜಲ ಯೋಜನೆಯಡಿ ಇರ್ದೆ, ಬೆಟ್ಟಂಪಾಡಿ, ನಿಡ್ಪಳ್ಳಿ, ಪಾಣಾಜೆ ಗ್ರಾಮಗಳ 88 ಮಂದಿ ಫಲಾನುಭವಿಗಳಿಗೆ ಉಚಿತ ಅಡುಗೆ ಅನಿಲದ ಸಿಲಿಂಡರ್‌, ಗ್ಯಾಸ್‌ ಕಿಟ್‌ ವಿತರಿಸಿ ಅವರು ಮಾತನಾಡಿದರು.

Advertisement

ಇರ್ದೆ ಬೆಟ್ಟಂಪಾಡಿ ಸೊಸೈಟಿಯ ಅಧ್ಯಕ್ಷ ಶಂಭು ಭಟ್‌ ಮಾತನಾಡಿ, ಮೋದಿಯವರ ಹಲವು ಯೋಜನೆಗಳು ಗ್ರಾಮೀಣ ಜನರ ಸರ್ವತೋಮುಖ ಅಭಿವೃದ್ಧಿಗೆ ಮತ್ತು ಆರೋಗ್ಯವನ್ನು ಕಾಪಾಡುವಲ್ಲಿ ಸಹಕಾರಿಯಾಗಿದೆ. ಅರ್ಹ ಫಲಾನುಭವಿಗಳಾಗಿದ್ದರೆ ಯೋಜನೆಗಳ ಲಾಭ ಪಡೆದುಕೊಂಡು ದೇಶ ಅಭಿವೃದ್ಧಿಗೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಸವಲತ್ತು ಉಪಯೋಗಿಸಿಕೊಳ್ಳಿ
ತಾ.ಪಂ. ಸದಸ್ಯೆ ಮೀನಾಕ್ಷಿ ಮಂಜುನಾಥ ಅವರು ಮಾತನಾಡಿ, ಗ್ಯಾಸ್‌ 15 ವರ್ಷ ಹಿಂದೆ ಶ್ರೀಮಂತರ ಸೊತ್ತಾಗಿತ್ತು. ಮಾತೆಯರು ಸೌದೆ ರಹಿತ ಅಡುಗೆ ಮಾಡುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಪ್ರಧಾನ ಮಂತ್ರಿಯವರು ಈ ಯೋಜನೆಯನ್ನು ಅನುಷ್ಠಾನಗೊಳಿಸಿದ್ದಾರೆ. ಸುರಕ್ಷತೆಯಿಂದ ಸವಲತ್ತುಗಳನ್ನು ಉಪಯೋಗಿಸಿಕೊಳ್ಳಿ ಎಂದು ಸಲಹೆ ನೀಡಿದರು. ಬೆಟ್ಟಂಪಾಡಿ ಗ್ರಾ.ಪಂ. ಅಧ್ಯಕ್ಷೆ ಬೇಬಿ, ಉಪಾಧ್ಯಕ್ಷೆ ಭವಾನಿ, ಮಣಿಕಂಠ ಎಚ್‌ಪಿ ಗ್ಯಾಸ್‌ ಎಜೆನ್ಸಿಯ ಅರುಣ ಕುಮಾರ ರೈ ಅನಾಜೆ ಉಪಸ್ಥಿತರಿದ್ದರು. ಬೆಟ್ಟಂಪಾಡಿ ಗ್ರಾ.ಪಂ. ಸದಸ್ಯ ರಮೇಶ್‌ ಶೆಟ್ಟಿ ಸ್ವಾಗತಿಸಿದರು. ಸದಸ್ಯ ವಿನೋದ್‌ ಕುಮಾರ್‌ ರೈ ವಂದಿಸಿದರು. ಸತ್ಯನಾರಾಯಣ ರೈ ಕಾರ್ಯಕ್ರಮ ನಿರ್ವಹಿಸಿದರು.

ಆರೋಗ್ಯವಂತ ಸಮಾಜ
ಅಧ್ಯಕ್ಷತೆ ವಹಿಸಿದ್ದ ತಾ.ಪಂ. ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್‌ ಮಾತನಾಡಿ, ಇಂಧನದ ಉಳಿತಾಯ ಮತ್ತು ಆರೋಗ್ಯ ಕಾಪಾಡಲು ಕೇಂದ್ರ ಸರಕಾರ ಮುಂದಾಗಿದೆ. ಇದರಿಂದ ಸಮುದಾಯ ಸಬಲೀಕರಣಗೊಳ್ಳುವು
ದರಿಂದ ಆರೋಗ್ಯವಂತ ಸಮಾಜ ನಿರ್ಮಾಣವಾಗಲು ಸಾಧ್ಯ. ಸೌಲಭ್ಯಗಳು ಜನರ ಮನೆಬಾಗಿಲಿಗೆ ತಲುಪಿದಾಗ ಯೋಜನೆ ಫಲಪ್ರದವಾಗುತ್ತದೆ ಎಂದು ಹೇಳಿದರು.

ಮಹಿಳೆಯರ ಸಬಲೀಕರಣಕ್ಕೆ ವಿವಿಧ ಯೋಜನೆಗಳು
ಬೆಟ್ಟಂಪಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಶೈಲಜಾ ಮಾತನಾಡಿ, ಸರಕಾರಗಳು ಮಹಿಳೆಯರ ಸಬಲತೆಗಾಗಿ ವಿವಿಧ ಯೋಜನೆಗಳನ್ನು ನಿರೂಪಿಸಿದೆ. ಸಮರ್ಪಕವಾಗಿ ಅನುಷ್ಠಾನಗೊಂಡರೆ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next