Advertisement

Belthangady ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಸೆರೆ

11:14 PM Nov 13, 2023 | Team Udayavani |

ಬೆಳ್ತಂಗಡಿ: ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.

Advertisement

ಕೇಶವ (43) ಬಂಧಿತ ಆರೋಪಿ. ಆರೋಪಿ ಬಾಲಕಿಯ ಮನೆಯ ಪರಿಚಿತನೇ ಆಗಿದ್ದು, ಆಗಾಗ ಬರುತ್ತಿದ್ದ ಎನ್ನಲಾಗಿದೆ. ಹತ್ತನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.

ಬಾಲಕಿ ಗರ್ಭಿಣಿಯಾದಾಗಲೇ ಮನೆಯವರಿಗೆ ಘಟನೆಯ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next