Advertisement

Belthangady: ಕಣಜದ ಹುಳು ದಾಳಿಗೊಳಗಾಗಿದ್ದ ವ್ಯಕ್ತಿ ಸಾವು

08:46 PM Sep 11, 2024 | Team Udayavani |

ಬೆಳ್ತಂಗಡಿ: ಕೃಷಿ ತೋಟದಲ್ಲಿ ಸೊಪ್ಪು ಕಡಿಯುತ್ತಿದ್ದ ವೇಳೆ ಕಣಜದ ಹುಳು ದಾಳಿಗೆ ಒಳಗಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

Advertisement

ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಕುಕ್ಕುದಕಟ್ಟೆ ನಿವಾಸಿ ರಾಜೇಶ ಶೆಟ್ಟಿ (44) ಮೃತಪಟ್ಟವರು. ಸೆ. 10ರಂದು ಕಣಜದ ಹುಳುಗಳುದಾಳಿ ನಡೆಸಿದ್ದು, ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಸೆ. 11ರಂದು ಕೊನೆಯುಸಿರೆಳೆದಿದ್ದಾರೆ. ಮೃತರ ಸಹೋದರ ಸತೀಶ ಶೆಟ್ಟಿ ಅವರು ನೀಡಿದ ದೂರಿನಂತಗೆ ವೇಣೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next