Advertisement

Belthangady: ಮರದಿಂದ ಬಿದ್ದು ವ್ಯಕ್ತಿ ಸಾವು

09:50 PM Oct 04, 2024 | Team Udayavani |

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಿರ್ಯಾ ಬಳಿ ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ವ್ಯಕ್ತಿಯೊಬ್ಬರು ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಅ. 4ರಂದು ನಡೆದಿದೆ.

Advertisement

ಮೃತ ವ್ಯಕ್ತಿಯನ್ನು ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್‌ (35) ಎಂದು ಗುರುತಿಸಲಾಗಿದೆ. ಮಿಯಾರ್‌ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ್ದ ಅವರು ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಕೆಳಗೆ ಬಿದ್ದಿದ್ದಾರೆ. ತತ್‌ಕ್ಷಣ ಸ್ಥಳದಲ್ಲಿದ್ದವರು ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಆ ವೇಳೆಗೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಖಚಿತ ಪಡಿಸಿದ್ದರು. ಮೃತರು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ತಂದೆ, ತಾಯಿಯನ್ನು ಅಗಲಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next