Advertisement
ಬೆಳ್ತಂಗಡಿ ಠಾಣಾ ಪೊಲೀಸರ ವಿರುದ್ಧ ಅವಾಚ್ಯ ಶಬ್ದಗಳಲ್ಲಿ ನಿಂದಿಸಿದ ಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಲ್ಲಿ ದಾಖಲಾಗಿದ್ದ ಎರಡು ಎಫ್ಐಆರ್‌ಗಳನ್ನು ರದ್ದುಪಡಿಸುವಂತೆ ಕೋರಿ ಹರೀಶ್ ಪೂಂಜ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ನ್ಯಾಯಪೀಠ ಶುಕ್ರವಾರ ಈ ನಿರ್ದೇಶನ ನೀಡಿ, ಅರ್ಜಿಗಳನ್ನು ಇತ್ಯರ್ಥಪಡಿಸಿತು.
ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ ಶಶಿರಾಜ್ ಶೆಟ್ಟಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಇದರಿಂದ ಸಿಟ್ಟಾಗಿದ್ದ ಅರ್ಜಿದಾರರು ಠಾಣೆಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ವಿರುದ್ಧ ಅವಾಚ್ಯವಾಗಿ ಬೈದು ಬೆದರಿಕೆ ಒಡ್ಡಿದ್ದರು. ಜತೆಗೆ, ಸರಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ಸಹ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಎರಡು ಎಫ್ಐಆರ್ ದಾಖಲಿಸಿದ್ದರು. ಅದನ್ನು ಪ್ರಶ್ನಿಸಿ ಹರೀಶ್ ಪೂಂಜ ಹೈಕೋರ್ಟ್ ಮೆಟ್ಟಿಲೆರಿದ್ದರು. ಅರ್ಜಿ ವಿಚಾರಣೆ ಹಂತದಲ್ಲಿರುವಾಗಲೇ ಅಧೀನ ನ್ಯಾಯಾಲಯಕ್ಕೆ ಪೊಲೀಸರು ಹರೀಶ್ ಪೂಂಜ ಹಾಗೂ ಇತರ ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.