Advertisement

ಧರ್ಮಾಧಿಕಾರಿಗಳಿಗೆ ಬೆಳ್ತಂಗಡಿ ಕ್ಷೇತ್ರದ ಜನತೆಯಿಂದ ಭವ್ಯ ಸ್ವಾಗತ

05:16 PM Jul 09, 2022 | Team Udayavani |

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೊದಿಯವರು ಕುಡುಮ (ಧರ್ಮಸ್ಥಳ) ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಳಿಸಿರುವ ಸಮಯದಲ್ಲಿ ಬೆಂಗಳೂರಿನ ಕಾರ್ಯಕ್ರಮದ ನಿಮಿತ್ತ ಪ್ರವಾಸದಲ್ಲಿದ್ದ ಪೂಜ್ಯರು ಇಂದು ಸಂಜೆ 5 ಗಂಟೆಗೆ ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಅವರನ್ನು ಚಾರ್ಮಾಡಿಯ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬಳಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಸ್ವಾಗತ ಕೋರಲಾಯಿತು.

Advertisement

ಶನಿವಾರ ಮುಂಜಾನೆ ಬೆಂಗಳೂರಿನಿಂದ ಧರ್ಮಾಧಿಕಾರಿಗಳು ಕ್ಷೇತ್ರಕ್ಕೆ ಹೊರಟಿದ್ದು ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಅಭಿಮಾನಿಗಳು ಸ್ವಾಗತ ಕೊರಿ ನೂರಾರು ವಾಹನಗಳ ಮೂಲಕ ಜಾಥ ಕೈಗೊಂಡಿದ್ದಾರೆ. ಅಲ್ಲಿಂದ ನೇರವಾಗಿ ಉಜಿರೆಯ ಮೂಲಕ ಶ್ರೀ ಕ್ಷೇತ್ರ ಧರ್ಮಸ್ಥಳದವರೆಗೆ ಭವ್ಯ ಮೆರವಣಿಗೆಯಲ್ಲಿ ಸ್ವಾಗತಕ್ಕೆ ವ್ಯವಸ್ಥೆಯಾಗಿದೆ.

ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ್ ಸಹಿತ ಗಣ್ಯರು ಸ್ವಾಗತ ಕೋರಿದರು.

Advertisement

Udayavani is now on Telegram. Click here to join our channel and stay updated with the latest news.

Next