Advertisement

Belthangady: ಆತ್ಮಹ*ತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವು

08:34 PM Nov 05, 2024 | Team Udayavani |

ಬೆಳ್ತಂಗಡಿ: ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಜಿಲ್ಲಾಸ್ಪತ್ರೆಯಲ್ಲಿ ನ. 5ರಂದು ಮೃತಪಟ್ಟಿದ್ದಾರೆ.

Advertisement

ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲ್‌ ಡಿ’ಸೋಜಾ ಮತ್ತು ಗ್ರೇಸಿ ಡಿ’ಸೋಜಾ ದಂಪತಿಯ ಪುತ್ರಿ ಪ್ರಿಯಾಂಕಾ (19) ಮೃತಪಟ್ಟ ಯುವತಿ. ಈಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿಯಾಗಿದ್ದರು. ತಾನು ತನ್ನ ಸ್ವಇಚ್ಛೆಯಿಂದ ಇಲಿ ಪಾಷಣ ಸೇವಿಸಿರುವುದಾಗಿ ಪೊಲೀಸ್‌ ತನಿಖೆಯಲ್ಲಿ ತಿಳಿಸಿದ್ದಾದರೂ ಉನ್ನತ ಮಟ್ಟದ ತನಿಖೆ ಪ್ರಗತಿಯಲ್ಲಿತ್ತು. ಚಿಕಿತ್ಸೆ ನೀಡಿದರೂ ಚೇತರಿಸಿಕೊಳ್ಳದೆ ಆಕೆ ಮೃತಪಟ್ಟಿದ್ದಾರೆ. ಮೃತರ ಸಹೋದರಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next