ಬೆಳ್ತಂಗಡಿ: ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ ಅವಿವಾಹಿತ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಯ ರ್ತಡ್ಕ ಕುರುಂಬುಡೇಲು ನಿವಾಸಿ ವನಿತಾ ಯಾನೆ ರೇವತಿ (30) ಮೃತರು.
ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ಅವರು ಅನಾರೋಗ್ಯದ ಕಾರಣಕ್ಕೆ ಕೆಲವು ದಿನಗಳ ಹಿಂದೆ ಮನೆಗೆ ಬಂದಿದ್ದರು.ಮನೆಯೊಳಗೆಯೇ ಈಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಅವರು ಬರೆದಿದ್ದ ಡೆತ್ನೋಟ್ ಲಭಿಸಿದೆ ಎನ್ನಲಾಗಿದ್ದು, ಧರ್ಮಸ್ಥಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.