ಬೆಳ್ತಂಗಡಿ: ಪ್ರಸ್ತುತ ದಿನಗಳಲ್ಲಿ ಕ್ಯಾನ್ಸರ್ ಖಾಯಿಲೆಯು ಮಾರಕವಾಗು ತ್ತಿದ್ದು, ಇದರ ಕುರಿತು ಜಾಗೃತಿ ಮೂಡಿಸುವ ಕಾರ್ಯ ಅಗತ್ಯವಾಗಿ ನಡೆಯಬೇಕಿದೆ. ಕ್ಯಾನ್ಸರ್ ಖಾಯಿಲೆಗೆ ಔಷಧವಾಗಿರುವ ಲಕ್ಷ್ಮಣ ಫಲದ ಸಸಿಗಳನ್ನು ಇದೇ ಮೊದಲ ಬಾರಿಗೆ ಶ್ರೀನಿವಾಸ್ ಪ್ರಸಾದ್ ಎನ್ನುವವರು ಉಚಿತವಾಗಿ ವಿತರಣೆ ಮಾಡುತ್ತಿರುವುದು ಶ್ಲಾಘನೀಯ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.
ಅವರು ಮಂಗಳವಾರ ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ತಾಲೂಕು ಆರೋಗ್ಯ ಅಧಿಕಾರಿ ಕಚೇರಿಯ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಜಂತುಹುಳ ನಿವಾರಣಾ ತರಬೇತಿ, ವಿಶ್ವ ಕ್ಯಾನ್ಸರ್ ದಿನಾಚರಣೆ ಹಾಗೂ ಮಾಹಿತಿ ಕಾರ್ಯಾಗಾರದಲ್ಲಿ ಮಾತನಾಡಿದರು.
ಎನ್‌ಸಿಡಿಯ ಸಂಯೋಜಕಿ ಡಾ| ಸುಷ್ಮಾ ಅಡಪ, ತಾ| ಆರೋಗ್ಯಾಧಿಕಾರಿ ಡಾ| ಕಲಾಮಧು, ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ| ವಿದ್ಯಾವತಿ, ಜಿಲ್ಲಾ ಆರೋಗ್ಯ ಶಿಕ್ಷಣಾ ಧಿಕಾರಿ ಜ್ಯೋತಿ ಉಪಸ್ಥಿತರಿದ್ದರು. ಜನರಿಗೆ ಮಾಹಿತಿ ತಲುಪಿಸುವ ನಿಟ್ಟಿನಲ್ಲಿ ಆಶಾ ಕಾರ್ಯ ಕರ್ತೆಯರಿಗೆ ಮಾಹಿತಿ ನೀಡಲಾಯಿತು.
2 ಸಾವಿರ ಸಸಿ ವಿತರಣೆ
ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಪ್ರಸಾದ್, ಮಂಜು ಮುಂಡತ್ತೋಡಿ, ಪೆರ್ಲ ಮುಂಡತ್ತೋಡಿ ಫ್ರೆಂಡ್ಸ್ ಅವರು ಸುಮಾರು 2 ಸಾವಿರ ಸಸಿಗಳನ್ನು ಉಚಿತವಾಗಿ ವಿತರಿಸಿದರು. ಜತೆಗೆ ಲಕ್ಷ್ಮಣ ಫಲದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ವಾಗಬೇಕು ಎಂದು ಶ್ರೀನಿವಾಸ್ ಪ್ರಸಾದ್ ಮನವಿ ಮಾಡಿದರು.