Advertisement

Belthangady: ಸಾರಿಗೆ ಬಸ್‌ ಢಿಕ್ಕಿ: ಪಾದಚಾರಿ ಗಂಭೀರ

08:37 PM Oct 17, 2024 | Team Udayavani |

ಬೆಳ್ತಂಗಡಿ: ನಿಡಿಗಲ್‌ ಸಮೀಪ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ ಹೊಡೆದ ಘಟನೆ ಬುಧವಾರ ಸಂಭವಿಸಿದೆ.

Advertisement

ಪರಿಣಾಮ ಸ್ಥಳೀಯವಾಗಿ ವ್ಯಾಪಾರ ಮಾಡಿಕೊಂಡಿರುವ ದಿನೇಶ್‌ ನಾಯ್ಕ (32) ಗಂಭೀರವಾಗಿ ಗಾಯಗೊಂಡಿದ್ದಾರೆ.

ಅವರನ್ನು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳ್ತಂಗಡಿ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next