Advertisement

‘ಹೊಗೆ ಮುಕ್ತ ಉದ್ದೇಶದಿಂದ ಪ್ರಧಾನಿಯಿಂದ ಉಜ್ಜಲ ಯೋಜನೆ’

02:46 PM Nov 22, 2018 | |

ಬೆಳ್ತಂಗಡಿ : ಸ್ವಚ್ಛ ಭಾರತ ಕಲ್ಪನೆ ಜತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಉಜ್ವಲ ಯೋಜನೆಯನ್ನು ಪ್ರಾರಂಭಿಸಿ, ಪ್ರತಿ ಹಳ್ಳಿಯನ್ನೂ ಹೊಗೆ ಮುಕ್ತಗೊಳಿಸುವ ಉದ್ದೇಶದಿಂದ ಜಾರಿಗೊಳಿಸಿದ್ದಾರೆ. ಅದನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕಿದೆ ಎಂದು ಶಾಸಕ ಹರೀಶ್‌ ಪೂಂಜ ಹೇಳಿದರು.

Advertisement

ಅವರು ಬುಧವಾರ ನಿಡಿಗಲ್‌ನ ಶ್ರೀ ಸತ್ಯನಾರಾಯಣ ಭಜನ ಮಂದಿರದಲ್ಲಿ ಕಲ್ಮಂಜ ಗ್ರಾಮದ ಬಿಜೆಪಿ ಗ್ರಾಮ ಸಮಿತಿ ವತಿಯಿಂದ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ಅಡುಗೆ ಅನಿಲ ಸೌಲಭ್ಯ ವಿತರಿಸಿ, ಮಾತನಾಡಿದರು. ಬೆಳ್ತಂಗಡಿ ಬಿಜೆಪಿ ಕಾರ್ಯದರ್ಶಿ ಸೀತಾರಾಮ ಬೆಳಾಲು, ಬೆಳ್ತಂಗಡಿ ತಾ.ಪಂ. ಸದಸ್ಯ ಶಶಿಧರ ಎಂ.ಕಲ್ಮಂಜ, ಕಲ್ಮಂಜ ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮೀ, ಉಪಾಧ್ಯಕ್ಷ ದಿನೇಶ್‌ ಗೌಡ, ಗ್ರಾ.ಪಂ. ಸದಸ್ಯರು ಮತ್ತಿತರರಿದ್ದರು.

70 ಮಂದಿ ಫಲಾನುಭವಿಗಳಿಗೆ ಅಡುಗೆ ಅನಿಲ ಸೌಲಭ್ಯ ವಿತರಿಸಲಾಯಿತು. ಗ್ರಾ.ಪಂ. ಸದಸ್ಯ ಕೃಷ್ಣಪ್ಪ ಗುಡಿಗಾರ್‌ ಸ್ವಾಗತಿಸಿ, ಬಿಜೆಪಿ ಕಲ್ಮಂಜ ಗ್ರಾಮ ಸಮಿತಿ ಅಧ್ಯಕ್ಷ ವಿಜಯ್‌ ವಂದಿಸಿದರು. ಮೋನಪ್ಪ ಟಿ. ಕಾರ್ಯಕ್ರಮ ನಿರೂಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next