Advertisement

Belthangady ಅವಿವಾಹಿತ ಯುವಕ ನೇಣು ಬಿಗಿದು ಆತ್ಮಹತ್ಯೆ

01:21 AM Aug 22, 2024 | Team Udayavani |

ಬೆಳ್ತಂಗಡಿ: ನಿಟ್ಟಡೆ ಗ್ರಾಮದ ಬೂತೆರ್‌ ದಿ| ಎಲ್ಲಪ್ಪ ಪೂಜಾರಿ ಪುತ್ರ ಸತೀಶ್‌ ಪೂಜಾರಿ (36) ಅವರು ಆ. 21ರಂದು ಬೆಳಗ್ಗೆ ಯಾರೂ ಇಲ್ಲದ ಸಮಯದಲ್ಲಿ ಮನೆಯ ಹತ್ತಿರದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

Advertisement

ಘಟನ ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತರು ಅವಿವಾಹಿತರಾಗಿದ್ದು, ಮೇಸ್ತ್ರಿ ಕೆಲಸ ಮಾಡುತ್ತಿದ್ದರು. ಮೃತರು ತಾಯಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next