Advertisement
ರಾಮನಗರ ಶ್ರೀ ದುರ್ಗಾ ನಿವಾಸಿ ರಾಘವೇಂದ್ರ ಆಚಾರ್ಯ ಅವರ ಮನೆಯಿಂದ ಈ ಕಳ್ಳತನ ನಡೆದಿದೆ. ರಾಘವೇಂದ್ರ ಆಚಾರ್ಯ ಅವರು ಬೆಳ್ತಂಗಡಿಯಲ್ಲಿ ಚಿನ್ನಾಭರಣ ತಯಾರಿ ಕೆಲಸವನ್ನು ಮಾಡುತ್ತಿದ್ದು ಬೆಳಗ್ಗೆ ಅಲ್ಲಿಗೆ ಹೋಗಿದ್ದರು. ಪತ್ನಿ ಖಾಸಗಿಯಾಗಿ ಕೆಲಸಕ್ಕೆ ಹೋಗಿದ್ದು, ಮಕ್ಕಳು ಶಾಲೆಗೆ ಹೋಗಿರುವುದರಿಂದ ಮನೆಯಲ್ಲಿ ಯಾರೂ ಇರಲಿಲ್ಲ. ಇದೇ ಸಂದರ್ಭವನ್ನು ನೋಡಿಕೊಂಡ ಕಳ್ಳರು ಮನೆಯ ಎದುರು ಬಾಗಿಲಿನ ಚಿಲಕವನ್ನು ಮುರಿದು ಒಳ ನುಗ್ಗಿ ಮೂರು ಬೀರುವನ್ನು ಓಪನ್ ಮಾಡಿ ಬಟ್ಟೆ-ಬರೆಗಳನ್ನು ಹೊರಗೆ ಎಳೆದು ಹಾಕಿ ಚೆಲ್ಲಾಪಿಲ್ಲಿಗೊಳಿಸಿ, ಚಿನ್ನಾಭರಣ ಹಾಗೂ ನಗದಿಗಾಗಿ ಹುಡುಕಾಡಿರುವುದು ಕಂಡುಬಂದಿದೆ.
Related Articles
ಮಧ್ಯಾಹ್ನ ರಾಘವೇಂದ್ರ ಆಚಾರ್ಯ ಅವರು ಮನೆಗೆ ಬಂದಾಗ ಈ ಪ್ರಕರಣ ಬೆಳಕಿಗೆ ಬಂದಿತ್ತು. ಸ್ಥಳೀಯ ಪರಿಸರದಲ್ಲಿ ಬೆಳಗ್ಗೆ ಅಪರಿಚತ ವ್ಯಕ್ತಿಯೋರ್ವ ಓಡಾಟ ನಡೆಸಿದ್ದನ್ನು ಸ್ಥಳೀಯರು ವಿಚಾರಿಸಿದಾಗ ಆತ ತಾನು ಜೋತಿಷ ಹೇಳುವವ ಎಂದು ಹೇಳಿದ್ದನೆನ್ನಲಾಗಿದೆ. ಈತನೇ ಈ ಕಳ್ಳತನ ನಡೆಸಿದನೇ ಅಥವಾ ಬೇರೆಯಾದರೂ ಈ ಕೃತ್ಯ ಎಸಗಿದರೇ, ಎಂಬ ಅನುಮಾನ ವ್ಯಕ್ತವಾಗಿದೆ. ರಾಘವೇಂದ್ರ ಆಚಾರ್ಯರು ಠಾಣೆಗೆ ಬಂದು ಮಾಹಿತಿ ನೀಡಿದ ಅನಂತರ ಸಂಜೆ ಬೆಳ್ತಂಗಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
Advertisement