Advertisement

ವಿಶ್ವ ಪಾರಂಪರಿಕ ಸ್ಥಳಗಳ ಪಟ್ಟಿಗೆ ಬೇಲೂರು, ಹಳೇಬೀಡು

12:52 AM Dec 09, 2020 | mahesh |

ಹಾಸನ: ವಿಶ್ವವಿಖ್ಯಾತ ಬೇಲೂರು ಮತ್ತು ಹಳೇಬೀಡು ದೇವಾಲಯಗಳು ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಯಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿವೆ. ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಈ ದೇವಾಲಯಗಳ ಸೇರ್ಪಡೆಗೆ ನಾಮನಿರ್ದೇಶನಗೊಳಿಸಿ ಶಿಫಾರಸು ಮಾಡಲಾಗಿದ್ದು, ತಾತ್ಕಾಲಿಕ ಪಟ್ಟಿಯಲ್ಲಿ ಸೇರ್ಪಡೆಯಾಗಿವೆ ಎಂದು ಹಾಸನ ಜಿಲ್ಲಾಧಿಕಾರಿ ಆರ್‌. ಗಿರೀಶ್‌ ತಿಳಿಸಿದ್ದಾರೆ.

Advertisement

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಅವರು, ಬೇಲೂರು ಚನ್ನಕೇಶವ, ಹಳೇಬೀಡಿನ ಹೊಯ್ಸಳೇಶ್ವರ ಮತ್ತು ಮೈಸೂರು ಜಿಲ್ಲೆಯ ಸೋಮನಾಥ ದೇವಾಲಯವನ್ನು ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆಗೊಳಿಸಲು ರಾಜ್ಯದಿಂದ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಯುನೆಸ್ಕೋದ ತಾತ್ಕಾಲಿಕ ಪಟ್ಟಿಯಲ್ಲಿ ಸೇರುವ ಅನುಮೋದನೆಯೂ ಆಗಿದೆ ಎಂದು ತಿಳಿಸಿದ್ದಾರೆ.

ಬೇಲೂರು, ಹಳೇಬೀಡಿನ ದೇಗುಲಗಳ ವಿನ್ಯಾಸ, ವಾಸ್ತುಶಿಲ್ಪಗಳು, ಪ್ರದರ್ಶಕ ರೂಪಗಳು ಮತ್ತು ಮೌಲ್ಯ ಗಮನಿಸಿ ಪ್ರಸ್ತಾವನೆ ಸಲ್ಲಿಕೆ ಆಗಬೇಕು. ನಾಮ ನಿರ್ದೇಶನ ಗೊಂಡ ಸ್ಥಳಗಳಲ್ಲಿ ಸ್ಥಳ ನಿರ್ವಹಣೆ ಯೋಜನೆಯ ವಿನ್ಯಾಸವನ್ನು ಯುನೆಸ್ಕೋಗೆ ಕಳುಹಿಸಬೇಕಿದೆ. ಈ ಹಿನ್ನೆಲೆಯಲ್ಲಿ ವ್ಯವಸ್ಥಿತ ಮತ್ತು ದೂರದೃಷ್ಟಿಯ ಯೋಜನೆ ಸಿದ್ಧಪಡಿಸಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next