Advertisement
ಸೋಮವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ವಿವಿಧ ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೆಲವು ಇಲಾಖೆಗಳು 2018-19ನೇ ಸಾಲಿನ ಕಾರ್ಯಕ್ರಮಗಳ ಕ್ರಿಯಾ ಯೋಜನೆಯನ್ನು ಇನ್ನೂ ಅಂತಿಮಗೊಳಿಸಿಲ್ಲ. ಕ್ರಿಯಾ ಯೋಜನೆಯನ್ನು ತಕ್ಷಣ ಅಂತಿಮಗೊಳಿಸಿ ಕಾರ್ಯಕ್ರಮ ಅನುಷ್ಠಾನ ಆರಂಭಿಸಬೇಕು. ಡಿಸೆಂಬರ್ ಅಂತ್ಯದ ಒಳಗಾಗಿ ಬಹುತೇಕ ಎಲ್ಲಾ ಕಾರ್ಯಕ್ರಮಗಳ ಅನುಷ್ಠಾನ ಪೂರ್ಣಗೊಳಿಸಬೇಕು ಎಂದು ಸೂಚನೆ ನೀಡಿದರು.
ಮಾತ್ರ ಕಾಮಗಾರಿಗಳನ್ನು ಕೈಗೊಳ್ಳಬೇಕು. ಕಾರ್ಯಕ್ರಮ ಅನುಷ್ಠಾನದ ಮೊದಲು ಕಡ್ಡಾಯವಾಗಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಸ್ಥಳೀಯ ಜನಪ್ರತಿನಿಧಿಗಳನ್ನು ಸಂಪರ್ಕಿಸಿ ಮಾಹಿತಿಯನ್ನು ಒದಗಿಸಬೇಕು ಎಂದು ತಿಳಿಸಿದರು. ಸಫಾಯಿ ಕರ್ಮಚಾರಿಗಳಿಗೆ ಸೌಲಭ್ಯ: ಸಫಾಯಿ ಕರ್ಮಚಾರಿಗಳಿಗೆ ಕೆಲಸದ ಸ್ಥಳದಲ್ಲಿ ಸೂಕ್ತ ಪರಿಕರಗಳು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು. ಒಳಚರಂಡಿ ದುರಸ್ತಿ ಇತ್ಯಾದಿ ಕೆಲಸಗಳನ್ನು ಯಂತ್ರಗಳ ಮೂಲಕ ಮಾತ್ರ ಮಾಡಬೇಕು. ಇಂತಹ ಕಾರ್ಯಗಳಿಗೆ ಸಫಾಯಿ ಕರ್ಮಚಾರಿಗಳನ್ನು ಬಳಸಿಕೊಂಡರೆ ಸಂಬಂಧಪಟ್ಟ ಅಧಿಕಾರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
Related Articles
Advertisement
ಸಫಾಯಿ ಕರ್ಮಚಾರಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲು ಸೂಕ್ತ ನಿವೇಶನ ಗುರುತಿಸಿ ಅಂತಿಮಗೊಳಿಸುವಂತೆ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಿಗೆ ಮತ್ತು ಗ್ರಾಮ ಪಂಚಾಯತ್ ಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ಇದನ್ನು ಆದ್ಯತೆ ಮೇರೆಗೆ ತೆಗೆದುಕೊಂಡು ಅಂತಿಮಗೊಳಿಸಬೇಕು ಎಂದು ಸೂಚನೆ ನೀಡಿದರು.
ಶಾಸಕರಾದ ಕುಮಾರ ಬಂಗಾರಪ್ಪ, ಅಶೋಕ ನಾಯ್ಕ, ವಿಧಾನ ಪರಿಷತ್ ಸದಸ್ಯ ಪ್ರಸನ್ನ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಸಫಾಯಿ ಕರ್ಮಚಾರಿಗಳಿಗೆ ಕೆಲಸದ ಸ್ಥಳದಲ್ಲಿ ಸೂಕ್ತ ಪರಿಕರಗಳು ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಬೇಕು. ಒಳಚರಂಡಿ ದುರಸ್ತಿ ಇತ್ಯಾದಿ ಕೆಲಸಗಳನ್ನು ಯಂತ್ರಗಳ ಮೂಲಕ ಮಾತ್ರ ಮಾಡಬೇಕು. ಇಂತಹ ಕಾರ್ಯಗಳಿಗೆ ಸಫಾಯಿ ಕರ್ಮಚಾರಿಗಳನ್ನು ಬಳಸಿಕೊಂಡರೆ ಸಂಬಂಧಪಟ್ಟ ಅಧಿಕಾರಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.ಕೆ.ಎ.ದಯಾನಂದ್, ಜಿಲ್ಲಾಧಿಕಾರಿ.