ಕೋಲ್ಕೊತಾ:ತೃಣಮೂಲ ಕಾಂಗ್ರೆಸ್ ಶಾಸಕ ಸತ್ಯಜಿತ್ ಬಿಸ್ವಾಸ್ ಕೊಲೆ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕುಲ್ ರಾಯ್ ಸಂಚುಕೋರ ಎಂದು ಸಿಐಡಿ ಚಾರ್ಜ್ ಶೀಟ್ ಸಲ್ಲಿಸಿರುವುದಾಗಿ ವರದಿ ತಿಳಿಸಿದೆ.
ಸಿಐಡಿ ಶನಿವಾರ(ಡಿಸೆಂಬರ್ 05, 2021) ರಾಣಾಘಾಟ್ ನ ಎಸಿಜೆಎಂ ಕೋರ್ಟ್ ಗೆ ಹೆಚ್ಚುವರಿ ಆರೋಪಪಟ್ಟಿ ಸಲ್ಲಿಸಿರುವುದಾಗಿ ವರದಿ ಹೇಳಿದೆ.ಮುಕುಲ್ ರಾಯ್ ಅನ್ನು ಆರೋಪಿ ಎಂದು ಹೆಸರಿಸಲಾಗಿದೆ. ಚಾರ್ಜ್ ಶೀಟ್ ನಲ್ಲಿ ಈವರೆಗೆ ಐದು ಮಂದಿ ಆರೋಪಿಗಳೆಂದು ಹೆಸರಿಸಲಾಗಿದೆ. ಮುಕುಲ್ ರಾಯ್ ಮತ್ತು ಬಿಜೆಪಿ ಸಂಸದ ಜಗನ್ನಾಥ್ ಸರ್ಕಾರ್ ಸೇರಿದಂತೆ ಐವರು ಆರೋಪಿಗಳಾಗಿದ್ದಾರೆ.
ಕೊಲೆ ಪ್ರಕರಣದಲ್ಲಿ ಸಿಐಡಿ ಮುಕುಲ್ ರಾಯ್ ಅನ್ನು ವಿಚಾರಣೆಗೊಳಪಡಿಸಿತ್ತು. ನಂತರ ಕೋಲ್ಕತಾ ಹೈಕೋರ್ಟ್ ಜಾಮೀನು ನೀಡಿತ್ತು ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಬಿಜೆಪಿ ಜೊತೆ ಸೇರಿದ್ದರೆ ಈಗಲೂ ನಾನೇ ಮುಖ್ಯಮಂತ್ರಿಯಾಗಿರುತ್ತಿದ್ದೆ: ಕುಮಾರಸ್ವಾಮಿ ಅಳಲು
ಈ ಬೆಳವಣಿಗೆ ಕುರಿತು ಪ್ರತಿಕ್ರಿಯೆ ಪ್ರತಿಕ್ರಿಯೆ ನೀಡಿರುವ ರಾಯ್, ನನ್ನ ಮೇಲೆ 44 ಕೇಸ್ ಗಳಿವೆ. ನಾನು ಈ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಅವರು ನನ್ನ ಬಂಧಿಸಲು ಸಾಧ್ಯವಿಲ್ಲ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸಲಹೆ ಮೇರೆಗೆ ನನ್ನ ಹೆಸರನ್ನು ಚಾರ್ಜ್ ಶೀಟ್ ನಲ್ಲಿ ದಾಖಲಿಸಿದ್ದಾರೆಯೇ? ನನಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ಪೂರ್ಣ ನಂಬಿಕೆ ಇದೆ ಎಂದು ತಿಳಿಸಿದ್ದಾರೆ.