Advertisement

Defamation Case: ಮಮತಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಬಂಗಾಳ ರಾಜ್ಯಪಾಲ ಬೋಸ್

10:28 AM Jun 29, 2024 | Team Udayavani |

ಕೋಲ್ಕತ್ತಾ: ರಾಜಭವನದಲ್ಲಿ ನಡೆಯುತ್ತಿರುವ ಚಟುವಟಿಕೆಗಳಿಂದಾಗಿ ರಾಜಭವನಕ್ಕೆ ಹೋಗಲು ಭಯವಾಗುತ್ತಿದೆ ಎಂದು ಮಹಿಳೆಯರು ತಮ್ಮ ಮೇಲೆ ದೂರು ನೀಡಿದ್ದಾರೆ ಎಂದು ಹೇಳಿದ ಒಂದು ದಿನದ ಬಳಿಕ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಶುಕ್ರವಾರ ಕಲ್ಕತ್ತಾ ಹೈಕೋರ್ಟ್‌ನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.

Advertisement

ಗುರುವಾರ ರಾಜ್ಯ ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ರಾಜಭವನಕ್ಕೆ ಭೇಟಿ ನೀಡಲು ಮಹಿಳೆಯರು ಹೆದರುವ ಸ್ಥಿತಿ ನಿರ್ಮಾಣವಾಗಿದೆ ಎಂದು ನನಗೆ ಹಲವು ದೂರುಗಳು ಬಂದಿವೆ ಎಂದು ಹೇಳಿದ್ದರು, ಆದರೆ ಈ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದು ರಾಜ್ಯಪಾಲರು ಹೇಳಿಕೆ ನೀಡಿದ್ದರು ಇದರ ನಡುವೆ ನಡೆದ ಹೆಚ್ಚಿನ ಸಭೆಗಳಲ್ಲಿ ಬ್ಯಾನರ್ಜಿ ರಾಜಭವನದ ವಿಚಾರವನ್ನು ಪ್ರಸ್ತಾಪಿಸುತಿದ್ದರು,

ಮುಖ್ಯಮಂತ್ರಿಗಳ ಹೇಳಿಕೆಯನ್ನು ಖಂಡಿಸಿ ಹೇಳಿಕೆ ನೀಡಿರುವ ರಾಜ್ಯಪಾಲರು ಉನ್ನತ ಸ್ಥಾನದಲ್ಲಿದ್ದವರು ಅವಹೇಳನಕಾರಿಯಾಗಿ ಹೇಳಿಕೆಗಳನ್ನು ನೀಡಬಾರದು ಎಂದು ಕಿಡಿಕಾರಿದ್ದರು. ಇದೀಗ ಬಂಗಾಳದ ರಾಜ್ಯಪಾಲರು, ಮುಖ್ಯಮಂತ್ರಿ ಸೇರಿದಂತೆ ಕೆಲವು ಟಿಎಂಸಿ ನಾಯಕರ ವಿರುದ್ಧ ಕೊಲ್ಕತ್ತಾ ಹೈ ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Mumbai-Nagpur ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಮಂದಿ ದುರ್ಮರಣ, ನಾಲ್ವರು ಗಂಭೀರ

Advertisement

Udayavani is now on Telegram. Click here to join our channel and stay updated with the latest news.

Next