Advertisement

ಶಿಕ್ಷಕರ ನೇಮಕಾತಿ ಹಗರಣ: ಸಚಿವ ಸ್ಥಾನದಿಂದ ಪಾರ್ಥ ಚಟರ್ಜಿ ವಜಾಗೊಳಿಸಿದ ಟಿಎಂಸಿ

04:40 PM Jul 28, 2022 | Team Udayavani |

ಕೋಲ್ಕತಾ: ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಪಟ್ಟಿರುವ ಪಾರ್ಥ ಚಟರ್ಜಿಯನ್ನು ತೃಣಮೂಲ ಕಾಂಗ್ರೆಸ್ ಸಚಿವ ಸ್ಥಾನದಿಂದ ವಜಾಗೊಳಿಸಿದೆ ಎಂದು ವರದಿ ತಿಳಿಸಿದೆ. ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ವರದಿ ಹೇಳಿದೆ.

Advertisement

ಇದನ್ನೂ ಓದಿ:ಪ್ರವೀಣ್‌ ಹತ್ಯೆ ಆರೋಪಿ ಕೆಲಸ ಮಾಡುತ್ತಿದ್ದ ಅಂಗಡಿ ಸೇರಿ ಹಲವೆಡೆ ಹಿಂದೂ ಕಾರ್ಯಕರ್ತರ ದಾಳಿ

ಆರೋಪಿ ಪಾರ್ಥ ಚಟರ್ಜಿಯನ್ನು ಪಕ್ಷದ ಎಲ್ಲಾ ಹುದ್ದೆ ಮತ್ತು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂಬ ಒತ್ತಡ ಹೆಚ್ಚಿದ ಹಿನ್ನೆಲೆಯಲ್ಲಿ ಈ ಸಭೆ ಕರೆಯಲಾಗಿತ್ತು ಎಂದು ವರದಿ ತಿಳಿಸಿದೆ.

ಪಾರ್ಥ ಚಟರ್ಜಿಯನ್ನು ಪಕ್ಷದ ಎಲ್ಲಾ ಹುದ್ದೆ ಮತ್ತು ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಟಿಎಂಸಿ ಪ್ರಧಾನ ಕಾರ್ಯದರ್ಶಿ ಮತ್ತು ವಕ್ತಾರ ಕುನಾಲ್ ಘೋಷ್ ಒತ್ತಾಯಿಸಿದ್ದರು. ಬುಧವಾರ ಜಾರಿ ನಿರ್ದೇಶನಾಲಯ ಚಟರ್ಜಿ ಆಪ್ತೆ ಅರ್ಪಿತಾ ಮುಖರ್ಜಿಗೆ ಸೇರಿದ ಎರಡನೇ ಫ್ಲ್ಯಾಟ್ ಮೇಲೆ ದಾಳಿ ನಡೆಸಿ 28.90 ಕೋಟಿ ರೂಪಾಯಿ ನಗದು, 5ಕೆಜಿಗೂ ಅಧಿಕ ಚಿನ್ನವನ್ನು ವಶಪಡಿಸಿಕೊಂಡಿತ್ತು.

Advertisement

Udayavani is now on Telegram. Click here to join our channel and stay updated with the latest news.

Next