ಕೋಲ್ಕತ್ತಾ: ಹೆಚ್ಚುತ್ತಿರುವ ಕೋವಿಡ್ 19 ಸೋಂಕು ಪ್ರಕರಣಗಳ ಕಾರಣದಿಂದ ಪಶ್ಚಿಮ ಬಂಗಾಳ ರಾಜ್ಯದಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿ ಮಾಡಲಾಗಿದೆ.
ಶಾಲೆ- ಕಾಲೇಜು,ಜಿಮ್ ಗಳು, ಸ್ವಿಮ್ಮಂಗ್ ಪೂಲ್ ಗಳು ಮತ್ತು ಬ್ಯೂಟಿ ಸಲೂನ್ ಗಳನ್ನು ಬಂದ್ ಮಾಡಲು ರಾಜ್ಯ ಸರ್ಕಾರ ಆದೇಶಿಸಿದೆ. ಸರ್ಕಾರಿ ಮತ್ತು ಖಾಸಗಿ ಕಚೇರಿಗಳಲ್ಲಿ ಶೇ.50 ರಷ್ಟು ಜನರಿಗೆ ಮಾತ್ರ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ.
50ರಷ್ಟು ಸಾಮರ್ಥ್ಯದಲ್ಲಿ ಸಿನಿಮಾ ಮಂದಿರಗಳು ಕಾರ್ಯನಿರ್ವಹಿಸಲಿವೆ. ಎಲ್ಲಾ ಶಾಪಿಂಗ್ ಮಾಲ್‌ಗಳು, ರೆಸ್ಟೋರೆಂಟ್‌ಗಳು, ಬಾರ್‌ಗಳು ಮತ್ತು ಮಾರುಕಟ್ಟೆಗಳು ಸಹ ಶೇಕಡಾ 50 ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸುತ್ತವೆ ಮತ್ತು ರಾತ್ರಿ 10 ಗಂಟೆಗೆ ಮುಚ್ಚಬೇಕಾಗುತ್ತದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಕೋವಿಡ್ ಮೂರನೇ ಅಲೆ ಬಗ್ಗೆ ಎಚ್ಚರ ವಹಿಸಿ: ಅಬಕಾರಿ ಸಚಿವ ಕೆ.ಗೋಪಾಲಯ್ಯ
ಪಶ್ಚಿಮ ಬಂಗಾಳ ರಾಜ್ಯದಲ್ಲಿ ಶನಿವಾರ 4,512 ಹೊಸ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿತ್ತು. ಇದರಿಂದ ಬಂಗಾಳದ ಸಕ್ರಿಯ ಸೋಂಕು ಪ್ರಕರಣಗಳ ಸಂಖ್ಯೆ 13,300 ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರ ಮತ್ತು ಕೇರಳದ ನಂತರ ಹೆಚ್ಚು ಸೋಂಕು ಪ್ರಕರಣಗಳ ಪೈಕಿ ದೇಶದಲ್ಲಿ ಬಂಗಾಳ ಮೂರನೇ ಸ್ಥಾನದಲ್ಲಿದೆ.