Advertisement
ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 25 ಸಾವಿ ರಕ್ಕೂ ಅಧಿಕ ಪಿಜಿಗಳ ಕಾರ್ಯಾಚರಣೆ ನಡೆಸುತ್ತಿ ರುವ ಮಾಹಿತಿ ಇದೆ. ಇದುವರೆಗೂ ಕೇವಲ 2 ಸಾವಿರ ಪಿಜಿಗಳಿಗೆ ಮಾತ್ರ ಪರವಾನಗಿ ವಿತರಿಸಲಾ ಗಿದೆ. ಆದರೆ ನಗರದಲ್ಲಿ ಸಾವಿರಾರು ಪಿಜಿಗಳಿವೆ. ಹೀಗಾಗಿ, ಅನಧಿಕೃತ ಪಿಜಿಗಳನ್ನು ಪತ್ತೆ ಹಚ್ಚುವ ಕಾರ್ಯಕ್ಕೂ ಅಧಿಕಾರಿಗಳು ಮುಂದಾಗಿದ್ದಾರೆ. ಲಭ್ಯವಾಗಿರುವ ಮಾಹಿತಿ ಪ್ರಕಾರ ಅನಧಿಕೃತ ಪಿಜಿಗಳಿಗೆ ಬಿಸಿ ಮುಟ್ಟಿಸಲು ಬಿಬಿಎಂಪಿ ಯೋಜನೆ ರೂಪಿಸಿದೆ.
Related Articles
Advertisement
ಪೇಯಿಂಗ್ ಗೆಸ್ಟ್‌ಗಳಲ್ಲಿನ ಎಲ್ಲಾ ಪ್ರವೇಶ/ನಿರ್ಗಮನ ದ್ವಾರ ಮತ್ತು ಆವರಣದ ಸುತ್ತಮುತ್ತಲಿನ ಘಟನಾವಳಿಗಳನ್ನು ಚಿತ್ರೀಕರಿಸಲು ಸಿಸಿ ಕ್ಯಾಮೆರಾಗಳನ್ನು ಅಳವಡಿಸಿರಬೇಕು.
ಪ್ರತಿ ಕ್ಯಾಮರಾದ ವಿಡಿಯೋ ಮತ್ತು ಫೋಟೇಜ್‌ಗಳನ್ನು 90 ದಿನಗಳವರೆಗೆ ಹಾರ್ಡ್ ವೇರ್ -ಸಾಫ್ಟ್‌ವೇರ್ ಬ್ಯಾಕಪ್ ಸ್ಟೋರೆಜ್ ಮಾಡಬೇಕು.
ವಸತಿ ಸಂಬಂಧಿತ ಕಟ್ಟಡ ನಿಯಮಗಳ ಪ್ರಕಾರ, ಪಿಜಿಗಳಲ್ಲಿ ಪ್ರತಿಯೊಬ್ಬ ನಿವಾಸಿಗೆ ವಾಸಕ್ಕೆ ತಲಾ 70 ಚದರ ಅಡಿಗಳ ಕನಿಷ್ಠ ಜಾಗವಿರುವುದನ್ನು ಖಚಿತಪಡಿಸಿಕೊಳ್ಳಬೇಕು.
ಕಟ್ಟಡದಲ್ಲಿ ಒದಗಿಸಲಾದ/ಲಭ್ಯವಿರುವ ಸೌಕರ್ಯಕ್ಕನುಗುಣವಾಗಿ ನಿರ್ದಿಷ್ಟ ಸಂಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿಯನ್ನು ನೀಡಬೇಕು.
ರಾಜಧಾನಿಯ ಪಿಜಿ ಮಾಲಿಕರು ಪರವಾನಗಿ ಜತೆಗೆ ಪಾಲಿಕೆಯ ಹೊಸ ಮಾರ್ಗಸೂಚಿಗಳ ಅಳವಡಿಸಿಕೊಳ್ಳಬೇಕು. ಒಂದು ಪಿಜಿಯಿಂದ ಕೆಟ್ಟ ಹೆಸರು ಬಂದರೆ ಎಲ್ಲ ಪಿಜಿಗಳಿಗೂ ಬರುವ ಸಾಧ್ಯತೆ ಇರುತ್ತದೆ. ಒಂದು ವೇಳೆ ಅನಧಿಕೃತವಾಗಿ ಪಿಜಿ ನಡೆಸಲು ಮುಂದಾದರೆ ಅಂತವರ ವಿರುದ್ಧ ಪಾಲಿಕೆ ಕ್ರಮ ಕೈಗೊಳ್ಳಲಿ. ●ಅರುಣ್ ಕುಮಾರ್, ಪಿಜಿ ಮಾಲಿಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ