Advertisement

Bengaluru: ನಿಫಾಗೆ ಬಲಿಯಾದ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ 25 ಮಂದಿ ಪತ್ತೆ

03:43 AM Sep 17, 2024 | Team Udayavani |

ಬೆಂಗಳೂರು: ಕೇರಳದಲ್ಲಿ ನಿಫಾ ಸೋಂಕಿನಿಂದ ಮೃತಪಟ್ಟ ವಿದ್ಯಾರ್ಥಿಯ ಸಂಪರ್ಕದಲ್ಲಿದ್ದ ಬೆಂಗಳೂರಿನ 25 ಮಂದಿಯನ್ನು ಪತ್ತೆ ಮಾಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

Advertisement

ಕೇರಳದ ಮೃತ ವಿದ್ಯಾರ್ಥಿಯು ಬೆಂಗಳೂರಿನಲ್ಲಿ ಮೆಡಿಕಲ್‌ ಕಾಲೇಜಿನ ಸೈಕಾಲಜಿ ವಿಭಾಗದಲ್ಲಿ ಅಧ್ಯಯನ ಮಾಡುತ್ತಿದ್ದರು. ಕಾಲಿಗೆ ಪೆಟ್ಟು ಬಿದ್ದ ಕಾರಣದಿಂದ ಬೆಂಗಳೂರಿನಿಂದ ಕೇರಳಕ್ಕೆ ತೆರಳಿದ್ದರು. ಸೆ.8ರಂದು ನಿಫಾಗೆ ಬಲಿಯಾಗಿದ್ದು ಆತನ ಅಂತ್ಯಸಂಸ್ಕಾರಕ್ಕೆ ಬೆಂಗಳೂರಿನಿಂದ 15 ಮಂದಿ ವಿದ್ಯಾರ್ಥಿಗಳು ತೆರಳಿದ್ದಾರೆ. ಅವರಲ್ಲಿ ಕೆಲವೊಬ್ಬರು ಬೆಂಗಳೂರಿಗೆ ಹಿಂದಿರುಗಿದ್ದಾರೆ. ಇನ್ನೂ ಕೆಲವರು ಅಲ್ಲಿಯೇ ಇದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಲ ಹಾಕುವ ಕೆಲಸ ಆರೋಗ್ಯ ಇಲಾಖೆಯಿಂದಾಗುತ್ತಿದೆ ಎಂದು ಮಾಹಿತಿ ನೀಡಿದರು.

ಮೃತ ಸೋಂಕಿತ ವ್ಯಕ್ತಿಗೆ ಸಂಪರ್ಕಕ್ಕೆ ಬಂದ ಪ್ರಾಥಮಿಕ ಸಂಪರ್ಕಕ್ಕೆ ಬಂದವರಲ್ಲಿ ಸೋಂಕಿನ ಲಕ್ಷಣಗಳು ವರದಿಯಾಗಿಲ್ಲ. ಆದರೆ ಆಂತಕಪಡುವ ಅಗತ್ಯವಿಲ್ಲ. ರಾಜ್ಯ ಸರ್ವೇಕ್ಷಣ ಘಟಕವನ್ನು ಜಾಗೃತಗೊಳಿಸಲಾಗಿದೆ. ಈಗಾಗಲೇ ಕೇರಳದಿಂದ ಆಗಮಿಸಿದವರನ್ನು ಸಂಪರ್ಕಿಸಲಾಗಿದೆ. ದೂರವಾಣಿ ಮೂಲಕ ಮಾತುಕತೆ ನಡೆಸಲಾಗಿದೆ. ಈ ವೇಳೆ ಯಾವುದೇ ರೋಗ ಲಕ್ಷಣಗಳು ಇಲ್ಲ ಎನ್ನುವುದಾಗಿ ದೃಢಪಡಿಸಿದ್ದಾರೆ. ಮುಂದಿನ ಎರಡು ದಿನದಲ್ಲಿ ಅಧಿಕಾರಿಗಳು ಸಂಪರ್ಕಿತ ವ್ಯಕ್ತಿಗಳ ಮನೆಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇಂದು ಅಧಿಕಾರಿಗಳ ಸಭೆ
ನಿಫಾ ಮುನ್ನೆಚ್ಚರಿಕೆ ಕ್ರಮವಾಗಿ ಮಂಗಳವಾರದಂದು ಆರೋಗ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಸಭೆ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next