Advertisement
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸಾರಿಗೆ ಇಲಾಖೆ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಬಿಎಂಟಿಸಿಗೆ ಸೇರ್ಪಡೆಯಾದ 100 ನೂತನ ಬಿಎಸ್-6 ಬಸ್ಗಳಿಗೆ ಹಸಿರು ನಿಶಾನೆ ತೋರಿಸಿ ಅವರು ಮಾತನಾಡಿದರು.
Related Articles
Advertisement
336 ಕೋಟಿ ರೂ. ವೆಚ್ಚದಲ್ಲಿ ಬಸ್ ಖರೀದಿ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, 336 ಕೋಟಿ ರೂ. ವೆಚ್ಚದಲ್ಲಿ 840 ಬಿಎಸ್-6 ಬಸ್ಗಳನ್ನು ಖರೀದಿಸ ಲಾಗಿದೆ. ಮುಂದಿನ ದಿನಗಳಲ್ಲಿ ಎಲೆಕ್ಟ್ರಾನಿಕ್ ಸೇರಿದಂತೆ ಮತ್ತಷ್ಟು ಬಸ್ಗಳು ರಸ್ತೆಗಿಳಿಯಲಿವೆ ಎಂದರು.
ಈ ವೇಳೆ ವಸತಿ ಸಚಿವ ಜಮೀರ್ ಅಹಮದ್, ಇಂಧನ ಸಚಿನ ಕೆ.ಜೆ.ಜಾರ್ಜ್, ಕೆಕೆಆಡಿರ್ಬಿ ಅಧ್ಯಕ್ಷರಾದ ಅಜಯ್ ಸಿಂಗ್, ಸಿಎಂ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್ ಇತರರಿದ್ದರು.
ನೂತನ ಬಸ್ನ ವಿಶೇಷತೆಗಳೇನು?
ಪರಿಸರ ಸ್ನೇಹಿ ಬಸ್ಗಳಾಗಿವೆ.
ಬಿಎಸ್ -4 ಬಸ್ ಗೆ ಹೋಲಿಸಿದರೆ ಹೊಗೆ ಹೊರಸುಸುವಿಕೆ ಕಡಿಮೆ
11 ಮೀಟರ್ ಉದ್ದ, ಹವಾನಿಯಂತ್ರಣರಹಿತ, ಡೀಸೆಲ್ ಚಾಲಿತ ಬಸ್ಗಳಾಗಿವೆ
ಪ್ರಯಾಣಿಕರ ಸುರಕ್ಷತೆಗಾಗಿ ಬಸ್ನೊಳಗೆ 3 ಸಿಸಿ ಕ್ಯಾಮೆರಾ ಅಳವಡಿಕೆ
3 ಎಲ್.ಇ.ಡಿ ಬೋರ್ಡ್
ವಾಯ್ಸ್ ಅನೌನ್ಸ್ಮೆಂಟ್ ವ್ಯವಸ್ಥೆ
ಮಹಿಳೆಯರ ಸುರಕ್ಷತೆಗೆ ತುರ್ತು ಪ್ಯಾನಿಕ್ ಅಲಾರ್ಮ್ ಬಟನ್
ತುರ್ತು ಸಂದರ್ಭಗಳಲ್ಲಿ ಪ್ರಯಾಣಿಕರ ನಿಲುಗಡೆಗೆ ಸ್ಟಾಪ್ ಬಟನ್