Advertisement

Bengaluru; ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ; ಮೂವರು ಕಾರ್ಮಿಕರು ಸಜೀವದಹನ

07:48 PM Feb 18, 2024 | Team Udayavani |

ಬೆಂಗಳೂರು: ನಗರದ ಕುಂಬಳಗೋಡು ಸಮೀಪದ ರಾಮಸಂದ್ರದ ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ, ಮೂವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ರವಿವಾರ ನಡೆದಿದೆ.

Advertisement

ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ ಸಿಬ್ಬಂದಿ ಹೊರಗೆ ಬರಲಾಗದೆ ಬೆಂಕಿಗಾಹುತಿಯಾಗಿದ್ದಾರೆ. ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುತ್ತಿದ್ದಾರೆ.

ಟ್ರಾನ್ಸ್ ಫಾರ್ಮರ್ ಸ್ಫೋಟಗೊಂಡ ಪರಿಣಾಮ ಪರ್ಫ್ಯೂಮ್ ಫ್ಯಾಕ್ಟರಿ ಹೊತ್ತಿ ಉರಿದಿದೆ.ಆದರೆ ಈ ವಿಚಾರವನ್ನು ಬೆಸ್ಕಾಂ ಅಧಿಕಾರಿಗಳು ಅಲ್ಲಗೆಳೆದಿದ್ದಾರೆ.

ಸ್ಥಳಕ್ಕೆ ಮಾಗಡಿ ಡಿವೈಎಸ್ಪಿ ಪ್ರವೀಣ್, ಕುಂಬಳಗೋಡು ಇನ್ಸ್ಪೆಕ್ಟರ್ ಮಂಜುನಾಥ್ ಉಗಾರ್ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ…

Advertisement
Advertisement

Udayavani is now on Telegram. Click here to join our channel and stay updated with the latest news.

Next