Advertisement

Bengaluru: ಪ್ರಿನ್ಸಿಪಾಲ್‌ ಬೈದಿದ್ದಕ್ಕೆ ಶಾಲೆಯ 3ನೇ ಮಹಡಿಯಿಂದ ಜಿಗಿದ ವಿದ್ಯಾರ್ಥಿನಿ!

03:05 PM Aug 24, 2024 | Team Udayavani |

ಬೆಂಗಳೂರು: ಪ್ರಾಂಶುಪಾಲರು ಬೈದರೆಂದು ವಿದ್ಯಾರ್ಥಿನಿಯೊಬ್ಬಳು ಶಾಲೆಯ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣ ಬ್ಯಾಟರಾಯನಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಬಾಪೂಜಿನಗರದ ಶಾಲೆಯೊಂದರಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಬಾಲಕಿ ಆತ್ಮಹತ್ಯೆಗೆ ಯತ್ನಿಸಿದವಳು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದು, ಪ್ರಾಣಾಪಾಯದಿಂದ ಪಾರಾಗಿ¨ªಾಳೆ. ಈ ಪ್ರಕರಣದ ಬಗ್ಗೆ ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಟ್ಟಡದಿಂದ ಬಾಲಕಿ ಜಿಗಿಯುವ ದೃಶ್ಯ ಸ್ಥಳೀಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಇದುವರೆಗೂ ಯಾರೂ ದೂರು ನೀಡಿಲ್ಲ ಎಂದು ತಿಳಿದು ಬಂದಿದೆ. ಇನ್ನು ಪ್ರಾಂಶುಪಾಲರು ಬೈದರೆಂದು ನೊಂದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಆರೋಪ ಕೇಳಿ ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next