Advertisement

ಬೆಂಗಳೂರು: ಶೌಚಾಲಯದೊಳಗೆ ಯುವತಿಯನ್ನು ಕೂಡಿ ಹಾಕಿದ್ದ ಕಿಡಿಗೇಡಿ

11:48 PM Jan 11, 2023 | Team Udayavani |

ಬೆಂಗಳೂರು: ಜಯನಗರದ ಕಾಲೇ ಜೊಂದರ ಮಹಿಳಾ ಶೌಚಾಲಯಕ್ಕೆ ನುಗ್ಗಿದ ಕಿಡಿಗೇಡಿಯೊಬ್ಬ ವಿದ್ಯಾ ರ್ಥಿನಿ ಜತೆ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ಮತ್ತೊಂದೆಡೆ ಕಿಡಿಗೇಡಿಯನ್ನು ಬಂಧಿಸುವಂತೆ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Advertisement

ಈ ಸಂಬಂಧ ಕಾಲೇಜಿನ ಪ್ರಾಂಶುಪಾಲರು ನೀಡಿದ ದೂರಿನ ಮೇರೆಗೆ ಜಯನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಪತ್ತೆಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಮಂಗಳವಾರ ಬೆಳಗ್ಗೆ ಸುಮಾರು 8 ಗಂಟೆಗೆ ಕಾಲೇಜಿನ ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋಗಿದ್ದರು. ಈ ವೇಳೆ ಶೌಚಾಲಯದ ಒಳಗಡೆಯಿದ್ದ ಯುವಕನನ್ನು ಕಂಡು ಆಕೆ ಜೋರಾಗಿ ಕೂಗಿಕೊಂಡಿದ್ದಾಳೆ. ಅದರಿಂದ ವಿಚಲಿತನಾದ ಅರೋಪಿ, ಆಕೆಯನ್ನು ಎಳೆದಾಡಿ ಅಸಭ್ಯವಾಗಿ ವರ್ತಿಸಿದ್ದಾನೆ. ಅಲ್ಲದೆ, ಆಕೆಯನ್ನು ಶೌಚಾಲಯದ ಒಳಗೆ ಕೂಡಿಹಾಕಿ ಚಿಲಕ ಹಾಕಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದರು.

ವಿದ್ಯಾರ್ಥಿಗಳಿಂದ ಪ್ರತಿಭಟನೆ
ಅಪರಿಚಿತನ ಕೃತ್ಯ ವಿರೋಧಿಸಿ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪುಂಡನನ್ನು ಬಂಧಿಸಬೇಕು. ಜತೆಗೆ ಕಾಲೇಜಿನಲ್ಲಿರುವ ಅವ್ಯವಸ್ಥೆ ಹಾಗೂ ವಿದ್ಯಾರ್ಥಿಗಳ ಭದ್ರತೆಗಾಗಿ ಸಿಸಿ ಕೆಮರಾ ಹಾಗೂ ಇತರ ಸೌಲಭ್ಯ ನೀಡಬೇಕು ಎಂದು ಕಾಲೇಜು ಆವರಣದಲ್ಲಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next