ಕಳೆದ 17 ದಿನಗಳಿಂದ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ವತ್ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಆಸ್ಪತ್ರೆಯ ಮೂಲಗಳ ಪ್ರಕಾರ ಫೆ. 28ರಂದು ಬಿಡುಗಡೆಗೆ ಸೂಚಿಸಲಾಗಿತ್ತು. ಆದರೆ, ವಿದ್ವತ್ ಕುಟುಂಬಸ್ಥರು ಗಂಭೀರ ಗಾಯವಾದ ಕಾರಣ ಇನ್ನಷ್ಟು ಚಿಕಿತ್ಸೆ ನೀಡುವಂತೆ ಮನವಿ ಮಾಡಿಕೊಂಡಿದ್ದರು. ಹೀಗಾಗಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಅನಂತರ ಮಾ.3ರಂದು ಬಿಡುಗಡೆ ಮಾಡಲು ಸೂಚಿಸಲಾಗಿತ್ತು. ಆದರೆ, ವೈದ್ಯಕೀಯ ಚಿಕಿತ್ಸಾ ವೆಚ್ಚ ಭರಿಸಲು ವಿಮೆ ಪ್ರಕ್ರಿಯೆ ತಡವಾದ ಕಾರಣ ವಿಳಂಬವಾಯಿತು. ಈ ಪ್ರಕ್ರಿಯೆ ರವಿವಾರ ಪೂರ್ಣಗೊಂಡ ಹಿನ್ನೆಲೆಯಲ್ಲಿ ತಡರಾತ್ರಿ 12.45ರ ಸುಮಾರಿಗೆ ಆಸ್ಪತ್ರೆಯಿಂದ ತೆರಳಿದ್ದಾರೆ ಎಂದು ತಿಳಿಸಿವೆ.
Advertisement
ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿದ್ವತ್ ಕುಟುಂಬಸ್ಥರು, ಮನೆಯಲ್ಲಿ ಸಂಬಂಧಿಕರು, ಸ್ನೇಹಿತರು ಸೇರಿದಂತೆ ಬರುವ, ಹೋಗುವವರ ಸಂಖ್ಯೆ ಹೆಚ್ಚಿರುವ ಕಾರಣ ವಿಶ್ರಾಂತಿ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿತ್ತು ಎಂದು ತಿಳಿಸಿದ್ದಾರೆ.