Advertisement

ಬೆಂಗಳೂರು: ಅಟಲ್ ಬಿಹಾರಿ ವಾಜಪೇಯಿ ಸ್ಮರಣೆ, ಸುಶಾಸನ ದಿನಾಚರಣೆ

06:41 PM Dec 25, 2020 | Mithun PG |

ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಡಿಸೆಂಬರ್ 25ರಂದು ಬೆಳಿಗ್ಗೆ ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣೆ, ಸುಶಾಸನ ದಿನಾಚರಣೆ ಮತ್ತು ಕಿಸಾನ್ ಸಮ್ಮಾನ್ ದಿನಾಚರಣೆ ನೆರವೇರಿತು. ಈ ವೇಳೆ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

Advertisement

ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲ್‌ಕುಮಾರ್ ಸುರಾಣಾ ಅವರು ಮಾತನಾಡಿ, ಅಟಲ್ ಬಿಹಾರಿ ವಾಜಪೇಯಿ ಅವರು ರಾಷ್ಟ್ರವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಿದರು. ನಮ್ಮ ನೆಚ್ಚಿನ ಪ್ರಧಾನಿಗಳಾದ ನರೇಂದ್ರ ಮೋದಿ ಅವರು ಅವರ ಸುಶಾಸನದ ಹಾದಿಯನ್ನು ತಮ್ಮದಾಗಿಸಿ ರಾಷ್ಟ್ರವನ್ನು ಅಭಿವೃದ್ಧಿ ಪಡಿಸಿದ್ದಾರೆ ಎಂದು ವಿವರಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು ಅವರು ಮಾತನಾಡಿ, ಅಜಾತಶತ್ರು ವಾಜಪೇಯಿ ಅವರನ್ನು ದೇಶ ಮರೆಯಲು ಸಾಧ್ಯವಿಲ್ಲ. ಪ್ರಗತಿಪಥದಲ್ಲಿ ದೇಶವನ್ನು ಮುನ್ನಡೆಸಿದ ಮಹಾನ್ ವ್ಯಕ್ತಿ ಅವರು ಎಂದು ತಿಳಿಸಿದರು.

ಅಲ್ಪಸಂಖ್ಯಾತರ ಅಭಿವೃದ್ಧಿ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಂ, ರಾಜ್ಯ ಎಸ್.ಸಿ. ಮೋರ್ಚಾದ ಅಧ್ಯಕ್ಷರಾದ ಚಲವಾದಿ ನಾರಾಯಣಸ್ವಾಮಿ, ಪಕ್ಷದ ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿಗಳಾದ ಲೋಕೇಶ್ ಅಂಬೆಕಲ್ಲು ಮತ್ತು ಮಾಧ್ಯಮ ವಿಭಾಗದ ರಾಜ್ಯ ಸಂಚಾಲಕರಾದ ಕರುಣಾಕರ್ ಖಾಸಲೆ, ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next