ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಶಂಕಿತರ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಘೋಷಿಸಿದೆ.
ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪ್ರಮುಖ ಆರೋಪಿಯಾದ ಮುಜಾಮುಲ್ ಶರೀಫ್ ನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತಿಬ್ಬರು ಆರೋಪಿಗಳ ಪೋಟೋ ಬಿಡುಗಡೆ ಮಾಡಿದ ತಂಡ ಮಾಹಿತಿ ನೀಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ.
ಕೆಫೆಯಲ್ಲಿ ಸುಧಾರಿತ ಸ್ಫೋಟಕ (ಐಇಡಿ) ಅಳವಡಿಸಿದ ಆರೋಪಿ ಮುಸಾವಿರ್ ಹುಸೇನ್ ಶಾಜಿಬ್ ಮತ್ತು ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇನ್ನೋರ್ವ ಆರೋಪಿಯಾದ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಅವರ ಫೋಟೋ ಬಿಡುಗಡೆ ಮಾಡಿ ಬಹುಮಾನ ಘೋಷಿಸಿದೆ. ಇವರಿಬ್ಬರೂ 2020ರ ಭಯೋತ್ಪಾದನಾ ಪ್ರಕರಣದಲ್ಲಿ ಬೇಕಾಗಿದ್ದವರಾಗಿದ್ದಾರೆ.
ಈ ಘಟನೆಗೆ ಸಂಬಂಧಿಸಿ ಎನ್‌ಐಎ ತಂಡ ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ನಂತರ, ಮಾರ್ಚ್ 28 ರಂದು ಪ್ರಕರಣದ ಸಂಚುಕೋರರಲ್ಲಿ ಒಬ್ಬನಾದ ಮುಜಾಮುಲ್ ಶರೀಫ್ ನನ್ನು ಬಂಧಿಸಿತ್ತು. ಘಟನೆಯಲ್ಲಿ ಭಾಗಿಯಾಗಿರುವ ಇತರ ಆರೋಪಿಗಳಿಗೆ ಶರೀಫ್ ಬೆಂಬಲವನ್ನು ನೀಡಿದ್ದಾನೆ ಎಂದು ಎನ್ಐಎ ಹೇಳಿದೆ.
ಇದನ್ನೂ ಓದಿ: LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ