ಬೆಂಗಳೂರು : ನಗರದ ವಿವಿಧೆಡೆ ಮತ್ತು ಹೊರವಲಯದಲ್ಲಿ ಭಾನುವಾರ ಮಧ್ಯಾಹ್ನ ಭಾರಿ ಮಳೆ ಸುರಿದಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಕೆ.ಆರ್.ಸರ್ಕಲ್ ನ ಅಂಡರ್ ಪಾಸ್ ನಲ್ಲಿ ನೀರಿನಲ್ಲಿ ಸಿಲುಕಿದ್ದ ಕಾರಿನಲ್ಲಿದ್ದ ನಾಲ್ವರನ್ನು ಸ್ಥಳೀಯರು ಮತ್ತು ಪೊಲೀಸರು ರಕ್ಷಿಸಿದ್ದಾರೆ. ಓರ್ವ ಯುವತಿ ತೀವ್ರ ಅಸ್ವಸ್ಥರಾಗಿದ್ದಾರೆ ಎಂದು ವರದಿಯಾಗಿದೆ.
Advertisement
ನೀರು ತುಂಬಿದ್ದ ವೇಳೆ ಏಕಾಏಕಿ ಕಾರು ಮುಳುಗಡೆಯಾಗಿದೆ. ಅಸ್ವಸ್ಥಗೊಂಡಿರುವ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಗರದ ವಿವಿಧ ಪ್ರದೇಶಗಳಲ್ಲಿ ಸುರಿದ ಭಾರಿ ಮಳೆಯಿಂದ ರಸ್ತೆಗಳು ನದಿಯಂತಾಗಿದ್ದು, ವಾಹನ ಸವಾರರು, ಬೀದಿ ವ್ಯಾಪಾರಿಗಳು ಪರದಾಡುವಂತಾಗಿದೆ.