ಬೆಂಗಳೂರು: ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ವಿದೇಶಗಳಿಂದ ಭಾರ ತೀಯ ಅಂಚೆ ಮೂಲಕ ತರಿಸಿಕೊಂಡಿದ್ದ 21.17 ಕೋಟಿ ರೂ. ಮೌಲ್ಯದ ವಿವಿಧ ಮಾದರಿಯ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಇಂಡಿಯನ್ ಪೋಸ್ಟ್ ಮುಖಾಂತರ ವಿವಿಧ ದೇಶಗಳಿಂದ ನಿಷೇಧಿತ ಮಾದಕ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದ ವ್ಯಕ್ತಿಗಳ ಮೇಲೆ ಸಿಸಿಬಿ ಪೊಲೀಸರು ನಿಗಾವಹಿಸಿದ್ದರು. ಬೆಂಗಳೂರು ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿ ತಂಡವು, ಈ ವರ್ಷದಲ್ಲಿ 12 ಪ್ರಕರಣಗಳನ್ನು ದಾಖಲು ಮಾಡಿ, ಕೆಲವು ಆರೋಪಿಗಳನ್ನು ಬಂಧಿಸಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು, ಆರೋಪಿಗಳ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳನ್ನು ದಾಖಲಿಸಿಕೊಂಡಿತ್ತು.
ಸೆಪ್ಟೆಂಬರ್‌ನಲ್ಲಿ ನಗರದ ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಇಂತಹುದೇ 2 ಪ್ರಕರಣಗಳು ಹಾಗೂ ಸಿಸಿಬಿ ಠಾಣೆಯಲ್ಲಿ 1 ಪ್ರಕರಣ ದಾಖಲಿಸಿದ್ದು, ಈ ಪ್ರಕರಣಗಳಲ್ಲಿ ಮೂವರು ವ್ಯಕ್ತಿಗಳನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿತ್ತು.
606 ಪಾರ್ಸಲ್‌ಗಳಲ್ಲಿ ಡ್ರಗ್ಸ್ ಪತ್ತೆ: ಇದರ ಮುಂದುವರಿದ ಭಾಗವಾಗಿ, ಚಾಮ ರಾಜ ಪೇಟೆಯ ಫಾರಿನ್ ಪೋಸ್ಟ್ ಆಫೀಸ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಯು.ಎಸ್, ಯು. ಕೆ., ಬೆಲ್ಜಿಯಂ, ಥಾಯ್ಲೆಂಡ್, ನೇದರ್ ಲ್ಯಾಂಡ್ ಇತರೆ ದೇಶಗಳಿಂದ ಬೆಂಗಳೂರಿಗೆ ತರಿಸಿಕೊಂಡಿದ್ದ ಸುಮಾರು 3,500 ಅನುಮಾನಾಸ್ಪದ ಪಾರ್ಸೆಲ್‌ಗಳನ್ನು ಶ್ವಾನ ದಳದ ಸಹಾಯದಿಂದ ಪರಿಶೀಲನೆ ನಡೆಸಿದ್ದರು. ಆ ವೇಳೆ ಈ ಪಾರ್ಸಲ್‌ಗಳ ಪೈಕಿ 606 ಪಾರ್ಸ ಲ್‌ಗಳಲ್ಲಿ ಡ್ರಗ್ಸ್ ಇರುವುದು ಖಚಿತವಾಗಿತ್ತು.
ಸಿಸಿಬಿ ಪೊಲೀಸರು 606 ಪಾರ್ಸೆಲ್ ಗಳಲ್ಲಿದ್ದ 21.17 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಆರೋಪಿಗಳು ಭಾರ ತೀಯ ಅಂಚೆ ಮೂಲಕ ಯು.ಎಸ್, ಯು.ಕೆ. ಬೆಲ್ಜಿಯಂ, ಥಾಯ್ಲೆಂಡ್ ಹಾಗೂ ಇತರೆ ವಿದೇಶಗಳಿಂದ ನಿಷೇಧಿತ ಮಾದಕ ವಸ್ತುಗಳನ್ನು ಬೆಂಗಳೂರಿಗೆ ತರಿಸಿಕೊಂಡು ಅವುಗಳನ್ನು ಹೆಚ್ಚಿನ ಬೆಲೆಗೆ ಪರಿಚಯಸ್ಥ ಗಿರಾಕಿಗಳಿಗೆ ಮಾರಾಟ ಮಾಡಿ ಅಕ್ರಮ ಹಣದ ಸಂಪಾದನೆಯಲ್ಲಿ ತೊಡಗುತ್ತಿ ದ್ದರೆಂಬ ಮಾಹಿತಿ ಪೊಲೀಸರಿಗೆ ಸಿಕ್ಕಿದೆ. ಈ ಬಗ್ಗೆ ತನಿಖೆ ಮುಂದುವರೆದಿದೆ.
ಶ್ವಾನಗಳ ನೆರವಿನಿಂದ ಡ್ರಗ್ಸ್ ಪತ್ತೆ
ವಿದೇಶದಿಂದ ಡ್ರಗ್ಸ್ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುವುದರ ಬಗ್ಗೆ ಸಿಸಿಬಿ ಪೊಲೀಸರು ನಿಗಾವಹಿಸಿದ್ದರು. ಯುಎಸ್, ಯು.ಕೆ., ಥಾಯ್ಲೆಂಡ್‌ನಿಂದ ಭಾರತೀಯ ಅಂಚೆ ಮೂಲಕ ಡ್ರಗ್ಸ್ ತರಿಸಿಕೊಳ್ಳುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಚಾಮರಾಜಪೇಟೆಯ ಫಾರಿನ್ ಪೋಸ್ಟ್ ಆಫೀಸ್‌ನಲ್ಲಿ ಕಸ್ಟಮ್ಸ್ ಅಧಿಕಾರಿಗಳೊಂದಿಗೆ ಜಂಟಿ ಕಾರ್ಯಾಚರಣೆ ಕೈಗೊಂಡಿದ್ದರು. ದೇಶಗಳಿಂದ ಬೆಂಗಳೂರಿಗೆ ತರಿಸಿಕೊಂಡಿದ್ದ ಸುಮಾರು 3,500 ಅನುಮಾನಾಸ್ಪದ ಪಾರ್ಸೆಲ್‌ಗಳನ್ನು ಶ್ವಾನ ದಳದ ಸಹಾಯದಿಂದ ಪರಿಶೀಲನೆ ನಡೆಸಿದ್ದರು. ಈ ವೇಳೆ 606 ಪಾರ್ಸೆಲ್‌ಗಳಲ್ಲಿದ್ದ 21.17 ಕೋಟಿ ರೂ. ಮೌಲ್ಯದ ಡ್ರಗ್ಸ್‌ಗಳನ್ನು ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.