Advertisement

ಡೈರಿ ಪ್ರಕರಣ; ಎಸ್ಐಟಿ ತನಿಖೆಗೆ ಹೈಕೋರ್ಟ್ ನಕಾರ, ಪಿಐಎಲ್ ವಜಾ

01:14 PM Mar 06, 2017 | Sharanya Alva |

ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪ ಕಾಣಿಕೆ ಸಲ್ಲಿಸಲಾಗಿದೆ ಎಂಬ ವಿವರ ಹೊಂದಿದೆ ಎನ್ನಲಾದ ಡೈರಿ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸಬೇಕೆಂದು ಕೋರಿ ಪತ್ರಕರ್ತ ಹಮೀದ್ ಪಾಳ್ಯ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ.

Advertisement

ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಾಂಗ್ರೆಸ್ ಎಂಎಲ್ ಸಿ ಗೋವಿಂದರಾಜು ಮನೆ ಮೇಲೆ ದಾಳಿ ನಡೆಸಿದ ವೇಳೆ ದೊರೆತಿದೆ ಎನ್ನಲಾದ ಡೈರಿ ಪ್ರಕರಣ ಈಗಾಗಲೇ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಏತನ್ಮಧ್ಯೆ ಡೈರಿ ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಬೇಕೆಂದು ಕೋರಿ ಪತ್ರಕರ್ತ ಹಮೀದ್ ಪಾಳ್ಯ ಹೈಕೋರ್ಟ್ ಮೆಟ್ಟಿಲೇರಿದ್ದರು.

ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಡೈರಿ ಪ್ರಕರಣ ಐಟಿ ಇಲಾಖೆಯಲ್ಲಿ ವಿಚಾರಣೆಗೆ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆಗೆ ಒಪ್ಪಿಸಲು ಸಾಧ್ಯವಿಲ್ಲ. ಸಹರಾ ಪ್ರಕರಣ ಉಲ್ಲೇಖಿಸಿದ ಹೈಕೋರ್ಟ್, ಹಮೀದ್ ಪಾಳ್ಯ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next