Advertisement
ಈ ಬಗ್ಗೆ ಮಾಹಿತಿ ನೀಡಿರುವ ಅವರು, ಪಾಲಿಕೆ ವ್ಯಾಪ್ತಿಯ ಎಲ್ಲಾ 8 ವಲಯಗಳಲ್ಲಿ ಎಲ್ಲಾ ಅಧಿಕೃತ ಹಾಗೂ ಅನಧಿಕೃತ ಪಿಜಿಗಳಿಗೆ ಭೇಟಿ ನೀಡಿ ಪಾಲಿಕೆ ಮಾರ್ಗ ಸೂಚಿಗಳನ್ನು ಪಾಲಿಸದ ಪಿಜಿಗಳನ್ನು ಮುಚ್ಚುವ ಕಾರ್ಯ ನಡೆಯುತ್ತಿದೆ. 2320 ಅನಧಿಕೃತ ಪಿಜಿಗಳಿದ್ದು, ಅವುಗಳ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Related Articles
Advertisement
ಪಿ.ಜಿ.ಗಳಿಗೆ ಬಿಬಿಎಂಪಿಯ ಮಾರ್ಗಸೂಚಿಗಳೇನು?
ಪೇಯಿಂಗ್ ಗೆಸ್ಟ್‌ಗಳ ಪ್ರವೇಶ, ನಿರ್ಗಮನ ಮತ್ತು ಆವರಣಗಳ ಸುತ್ತಮುತ್ತಲೂ ನಡೆಯುವ ಘಟನೆಗಳನ್ನು ಚಿತ್ರೀಕರಿಸುವ ಸಿಸಿ ಕ್ಯಾಮೆರಾ ಅಳವಡಿಸಿ, ಫೋಟೇಜ್ ಗಳನ್ನು 30 ದಿನಗಳ ಬ್ಯಾಕಪ್ ಇರುವಂತೆ ಅಳವಡಿಸುವುದು.
ವಾಸಕ್ಕೆ ಸಂಬಂಧಿತ ಕಟ್ಟಡದ ನಿಯಮಗಳ ಪ್ರಕಾರ, ಪ್ರತಿಯೊಬ್ಬ ನಿವಾಸಿಯು ತಲಾ 70 ಚದರ ಅಡಿಗಳಿಗಿಂತ ಕನಿಷ್ಠ ಜಾಗವನ್ನು ಹೊಂದಿರುವುದನ್ನು ಖಚಿತಪಡಿಸಿಕೊಳ್ಳ ಬೇಕು. ಕಟ್ಟಡದಲ್ಲಿ ಒದಗಿಸಲಾದ /ಲಭ್ಯವಿರುವ ಸೌಕರ್ಯಕ್ಕನುಗುಣವಾಗಿ ನಿರ್ದಿಷ್ಟ ಸಂಖ್ಯೆಯ ನಿವಾಸಿಗಳ ವಾಸಕ್ಕೆ ಮಾತ್ರ ಪರವಾನಗಿಯನ್ನು ನೀಡತಕ್ಕದ್ದು.
ಪೇಯಿಂಗ್ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳಿಗೆ ಸ್ವತ್ಛ ಹಾಗೂ ನೈರ್ಮಲ್ಯತೆ ಹೊಂದಿರುವ ಸ್ನಾನಗೃಹಗಳು ಮತ್ತು ಶೌಚಾಲಯಗಳ ಸೇವೆಯನ್ನು ಒದಗಿಸಬೇಕು.
ಪೇಯಿಂಗ್ ಗೆಸ್ಟ್ ಗಳಲ್ಲಿ ಕಡ್ಡಾಯವಾಗಿ ಶುದ್ಧ ಕುಡಿಯುವ ನೀರಿನ ಸೌಲಭ್ಯವಿರಬೇಕು.
ಪೇಯಿಂಗ್ ಗೆಸ್ಟ್‌ಗಳಲ್ಲಿ ಉದ್ದಿಮೆದಾರರು ತಮ್ಮದೇ ಆದ ಅಡುಗೆಮನೆ ಹೊಂದಿದ್ದಲ್ಲಿ, ಪಾಲಿಕೆಯಿಂದ ಉದ್ದಿಮೆ ಪರವಾನಗಿ ನೀಡಿದ 3 ತಿಂಗಳ ಅವಧಿಯೊಳಗೆ ಲೈಸೆ ನ್ಸ್ ಪಡೆಯಬೇಕು.
ಉದ್ದಿಮೆದಾರರು/ ಮಾಲಿಕರು ಪೇಯಿಂಗ್ ಗೆಸ್ಟ್‌ಗಳಲ್ಲಿ ವಾಸಿಸುವ ನಿವಾಸಿಗಳ ಸುರಕ್ಷತಾ ದೃಷ್ಟಿಯಿಂದ ಕನಿಷ್ಠ ಪಕ್ಷ ಒಬ್ಬ ಸಿಬ್ಬಂದಿಯನ್ನಾ ದರೂ ಕಡ್ಡಾಯವಾಗಿ 24*7 ಸೇವೆಯಡಿಯಲ್ಲಿ ನಿಯೋಜಿಸಬೇಕು.
ಪಿಜಿ ಉದ್ದಿಮೆಗಳಿಗೆ ಪಾಲಿಕೆಯಿಂದ ವಾಣಿಜ್ಯ ಪರವಾನಗಿ ಪತ್ರ ವಿತರಿಸುವ ಮುನ್ನ ಉದ್ದೇಶಿತ ಕಟ್ಟಡದಲ್ಲಿ ಮಾಲಿಕರು ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿರುವ ಬಗ್ಗೆ ಸಕ್ಷಮ ಪ್ರಾಧಿಕಾರದಿಂದ ಅಧಿಕೃತ ಪ್ರಮಾಣ ಪತ್ರ ಪಡೆದಿರಬೇಕು.
ತುರ್ತು ಸೇವೆಗಳಿಗೆ ಸಂಬಂಧಿಸಿದಂತೆ, ಪೇಯಿಂಗ್ ಗೆಸ್ಟ್ ಕಟ್ಟಡಗಳಲ್ಲಿ ಬಿಬಿಎಂಪಿ ಸಹಾಯವಾಣಿ ಸಂಖ್ಯೆ 1533 ಮತ್ತು ಪೊಲೀಸ್ ಇಲಾಖೆಯ ಸಹಾಯವಾಣಿ ಸಂಖ್ಯೆ 101 ಅನ್ನು ಪ್ರದರ್ಶಿಸುವ ಫಲಕವನ್ನು ಅಳವಡಿಸಿರಬೇಕು.
ಪಿಜಿ ಮಾಲಿಕರು ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಂಗಡಿಸಿ, ವಿಲೇವಾರಿಗೊಳಿಸಲು ಕ್ರಮವಹಿಸಬೇಕು.