Advertisement

Bengaluru: ರಾಡ್‌ನಿಂದ ಹೊಡೆದು ಯುವಕನ ಬರ್ಬರ ಹತ್ಯೆ

10:24 AM Jun 25, 2024 | Team Udayavani |

ಬೆಂಗಳೂರು: ಮರಕೆಲಸ ಮಾಡುತ್ತಿದ್ದ ಯುವಕನಿಗೆ ಕಬ್ಬಿಣದ ರಾಡ್‌ನಿಂದ ಹೊಡೆದು ಹತ್ಯೆಗೈದಿರುವ ಘಟನೆ ಗಂಗಮ್ಮನಗುಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

Advertisement

ಅಬ್ಬಿಗೆರೆ ನಿವಾಸಿ ಮಂಜುನಾಥ್‌ (17) ಕೊಲೆಯಾದ ಯುವಕ.

ಘಟನೆಗೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಹಳೇ ದ್ವೇಷ ಅಥವಾ ಪ್ರೀತಿಯ ವಿಚಾರಕ್ಕೆ ಕೃತ್ಯ ನಡೆದಿರುವ ಸಾಧ್ಯೆತೆಯಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ. ಕೊಲೆಯಾದ ಮಂಜುನಾಥ್‌ಗೆ ಅಪ್ಪ-ಅಮ್ಮ ಇಲ್ಲ. ಹೀಗಾಗಿ ಅಬ್ಬಿಗೆರೆಯ ಚಿಕ್ಕಪ್ಪನ ಮನೆಯಲ್ಲಿ ವಾಸವಾಗಿದ್ದ. ಎಸ್‌ಎಸ್‌ಎಲ್‌ಸಿ ಅನುತ್ತೀರ್ಣಗೊಂಡಿದ್ದು, ಚಿಕ್ಕಪ್ಪನ ಜತೆಗೆ ಮರ ಕೆಲಸಕ್ಕೆ ಹೋಗು ತ್ತಿದ್ದ. ಕೆಲ ದಿನಗಳ ಹಿಂದೆ ಮದ್ಯ ಸೇವಿಸಿದ್ದ ಎಂಬ ಕಾರಣಕ್ಕೆ ಚಿಕ್ಕಪ್ಪ ಆತನಿಗೆ ಹೊಡೆದು ಬುದ್ದಿ ಹೇಳಿದ್ದರು. ಈ ನಡುವೆ ಭಾನುವಾರ ನಸುಕಿನ 2.30ರಲ್ಲಿ ಮನೆಯಿಂದ ಹೊರಗಡೆ ಬಂದ ಮಂಜುನಾಥ್‌, ವೈಮ್ಯಾಕ್ಸ್‌ ಸರ್ಕಲ್‌ ಬಳಿ ನಡೆಯುತ್ತಿದ್ದ ನಾಟಕ ನೋಡಲು ಹೋಗಿದ್ದಾನೆ. ಆ ನಂತರ ನಾಟಕ ಮುಗಿಸಿಕೊಂಡು ವಾಪಸ್‌ ಬರುವಾಗ ಕ್ಷುಲ್ಲಕ ವಿಚಾರಕ್ಕೆ ಸ್ಥಳೀಯ ಯುವಕರ ಜತೆ ಜಗಳ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಇದೇ ವಿಚಾರಕ್ಕೆ ಕೃತ್ಯ ನಡೆದಿರುವ ಸಾಧ್ಯತೆಯಿದೆ ಎಂದು ಶಂಕಿಸಲಾಗಿದೆ. ಮತ್ತೂಂದೆಡೆ ಮಗ ಮನೆಯಲ್ಲಿ ಕಾಣದಕ್ಕೆ ಗಾಬರಿಗೊಂಡ ಚಿಕ್ಕಪ್ಪ ಮತ್ತು ಚಿಕ್ಕಮ್ಮ ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ಆದರೆ, ಎಲ್ಲಿಯೂ ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದರು.

ದಾರಿಹೋಕರಿಂದ ಪೊಲೀಸರಿಗೆ ಮಾಹಿತಿ: ಭಾನುವಾರ ಬೆಳಗ್ಗೆ 11 ಗಂಟೆಗೆ ವೈಮ್ಯಾಕ್‌ ಸರ್ಕಲ್‌ ಬಳಿಯ ಖಾಲಿ ಜಾಗದಲ್ಲಿನ ಕಸದ ರಾಶಿ ಸಮೀಪ ಯುವಕನ ಶವ ಗಮನಿಸಿದ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕೆ ಧಾವಿಸಿದ ಪೊಲೀಸರು ಮೃತದೇಹ ಪರಿಶೀಲಿಸಿದಾಗ ಮಂಜುನಾಥ್‌ ಎಂಬುದು ಗೊತ್ತಾಗಿದೆ. ಈತನ ತಲೆಗೆ ಕಬ್ಬಿಣ ರಾಡ್‌ನಿಂದ ಹೊಡೆದು ಕೊಲೆಗೈದಿದ್ದಾರೆ. ಜತೆಗೆ ಆತನ ದೇಹದ ಕೆಲ ಭಾಗದ ಮೇಲೆ ತರಚಿದ ಗಾಯಗಳು ಕಂಡು ಬಂದಿರುವುದು ಪ್ರಾಥಮಿಕ ತನಿಖೆಯಲ್ಲಿ ಪತ್ತೆಯಾಗಿದೆ. ಕೃತ್ಯ ಯಾವ ಕಾರಣಕ್ಕೆ ನಡೆದಿದೆ ಎಂಬುದು ಗೊತ್ತಾಗಿಲ್ಲ.

Advertisement

ಮತ್ತೂಂದೆಡೆ ಮಂಜುನಾಥ್‌, ಸ್ಥಳೀಯ ಯುವತಿ ಯೊಬ್ಬಳನ್ನು ಪ್ರೀತಿಸುತ್ತಿದ್ದ. ಈ ವಿಚಾರಕ್ಕೆ ಕೊಲೆಯಾ ಗಿರುವ ಸಾಧ್ಯತೆಯಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಗಂಗಮ್ಮನಗುಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next