Advertisement

Bengaluru Crime: ಚಾಕುವಿನಿಂದ ಎದೆಗೆ ಇರಿದು ಸ್ನೇಹಿತನ ಹತ್ಯೆ

12:21 PM Jul 11, 2024 | Team Udayavani |

ಬೆಂಗಳೂರು: ಹಣಕಾಸಿನ ವಿಚಾರಕ್ಕೆ ಸ್ನೇಹಿತನೇ ಚಾಕುವಿನಿಂದ ಇರಿದು ಕೊಲೆಗೈದಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟ್ಯಾಕ್ಸಿಗಳ ನಿಲ್ದಾಣದ ಪಿ7ನಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

Advertisement

ಎನ್‌.ಎಸ್‌.ಪಾಳ್ಯ ನಿವಾಸಿ ಲೋಕೇಶ್‌ (35) ಕೊಲೆಯಾದ ಟ್ಯಾಕ್ಸಿ ಚಾಲಕ. ಕೃತ್ಯ ಎಸಗಿದ ಆತನ ಸ್ನೇಹಿತ ಜೆ.ಪಿ.ನಗರ ನಿವಾಸಿ ಪಿ.ಮುತ್ತುರಾಜು ಅಲಿಯಾಸ್‌ ಕಿರಣ್‌ ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿ ಮುತ್ತುರಾಜು ಮತ್ತು ಲೋಕೇಶ್‌ ಸ್ನೇಹಿತರಾಗಿದ್ದು, ಇಬ್ಬರ ನಡುವೆ ಹಣಕಾಸಿನ ವ್ಯವಹಾರ ಇತ್ತು. ಮುತ್ತುರಾಜು ಬಳಿ ಲೋಕೇಶ್‌, ಸಾವಿರಾರು ರೂ. ಸಾಲ ಪಡೆದುಕೊಂಡಿದ್ದ. ಆದರೆ, ನಿಗದಿತ ಸಮಯಕ್ಕೆ ವಾಪಸ್‌ ನೀಡಿರಲಿಲ್ಲ. ಇದೇ ವಿಚಾರವಾಗಿ ಮಂಗಳವಾರ ತಡರಾತ್ರಿ 11 ಗಂಟೆ ಸುಮಾರಿಗೆ ಕೆಂಪೇಗೌಡ ವಿಮಾನ ನಿಲ್ದಾಣದ ಟ್ಯಾಕ್ಸಿ ನಿಲ್ದಾಣದಲ್ಲಿ ಇಬ್ಬರ ನಡುವೆ ಜಗಳ ನಡೆದಿದೆ. ಅದು ವಿಕೋಪಕ್ಕೆ ಹೋದಾಗ, ಆರೋಪಿ ತನ್ನ ಬಳಿಯಿದ್ದ ಚಾಕುವಿನಿಂದ ಲೋಕೇಶ್‌ನ ಎದೆ ಹಾಗೂ ಇತರೆ ಭಾಗಗಳಿಗೆ ಇರಿದು ಕೊಲೆಗೈದಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಚಾಲಕ ಮೃತ ಪಟ್ಟಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.

 

Advertisement

Udayavani is now on Telegram. Click here to join our channel and stay updated with the latest news.

Next