ಬೆಂಗಳೂರು: ಬೆತ್ತಲಾಗಿ ಓಡಾಡುತ್ತಿದ್ದ ನೈಜೀರಿಯನ್ ಪ್ರಜೆಯನ್ನು ಸಂಪಿಗೆಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಹೆಣ್ಣೂರು ಕ್ರಾಸ್ ನಿವಾಸಿ ಜೇಮ್ಸ್ (33) ಬಂಧಿತ. ನೈಜೀರಿಯಾ ಮೂಲದ ಆರೋಪಿ ಸಂಪಿಗೆಹಳ್ಳಿಯ ಶಿವರಾಮಕಾರಂತ ಬಡಾವಣೆ ಪಾರ್ಕ್ ಬಳಿ ಶನಿವಾರ ಸಂಜೆ ಆರೋಪಿ ಬೆತ್ತಲಾಗಿ ಓಡಾಡುತ್ತಿದ್ದ. ಅದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸಂಪಿಗೆಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಯನ್ನು ಬಂಧಿಸಲು ಮುಂದಾದಾಗ ಆತ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿದ್ದ. ಹೀಗಾಗಿ ಸ್ಥಳಕ್ಕೆ ಹೆಚ್ಚುವರಿ ಸಿಬ್ಬಂದಿ ಕರೆಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆತನ ಮೈಮೇಲೆ ಗಾಯಗಳಿದ್ದ ಹಿನ್ನೆಲೆಯಲ್ಲಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಹಲ್ಲೆ ಸಂಬಂಧ ಜೇಮ್ಸ್ ವಿರುದ್ಧ ಸಂಪಿಗೆಹಳ್ಳಿ ಪೊಲೀಸ್ ಠಾಣೆಯ ಪೇದೆ ಶ್ರೀನಿವಾಸ ಮೂರ್ತಿ ದೂರು ನೀಡಿದ್ದಾರೆ. ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆರೋಪಿ ಮಾನಸಿಕ ಅಸ್ವಸ್ಥನಂತೆ ಕಂಡು ಬಂದಿದೆ. ತನಿಖೆಗೆ ಸಹಕರಿಸುತ್ತಿಲ್ಲ. ಆತನ ಹಿನ್ನೆಲೆ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಹೀಗಾಗಿ ಆತನ ಮೂಲ ಪತ್ತೆ ಹಚ್ಚಲಾಗುತ್ತಿದೆ ಎಂದು ಪೊಲೀಸರು ಹೇಳಿದರು. ಸಂಪಿಗೆಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕುದ್ಕೋಳಿ: ಗೋ ಕಳ್ಳರಿಂದ ಎಸ್‌ಐ ಮೇಲೆ ದಾಳಿ; ಪರಾರಿಯಾದ ಕಳ್ಳರು, ವಾಹನ, ಜಾನುವಾರು ವಶಕ್ಕೆ