Advertisement
ಸಂಜಯನಗರದ ಅಣ್ಣಯ್ಯ ಲೇಔಟ್ ನಿವಾಸಿ ಚೈತ್ರಾವತಿ (34) ಮೃತರು.
Related Articles
Advertisement
ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ: ಮೃತರ ಸಹೋದರ ಮನೆ ಬಳಿ ಬಂದು ಕಿಟಕಿ ಮೂಲಕ ನೋಡಿದಾಗ ಚೈತ್ರಾವತಿ ಮೃತದೇಹ ಫ್ಯಾನ್‌ಗೆ ಸೀರೆಯಲ್ಲಿ ನೇಣು ಬಿಗಿದುಕೊಂಡ ಸ್ಥಿತಿ ಯಲ್ಲಿ ಕಂಡು ಬಂದಿದೆ. ಅವರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಬಾಗಿಲು ತೆಗೆದು, ಒಳ ಹೋಗಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಸಮೀಪದ ಆಸ್ಪತ್ರೆಗೆ ರವಾನಿಸಿದ್ದಾರೆ.
ಹಳೆಯ ಡೆತ್ ನೋಟ್ ಪತ್ತೆ: ಪ್ರಕರಣ ದಾಖ ಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಚೈತ್ರಾ ವತಿಯ ಬೆಡ್‌ರೂಮ್ ಪರಿಶೀಲಿಸಿದಾಗ, ಒಂದು ಪುಟದ ಡೆತ್‌ನೋಟ್ ಪತ್ತೆಯಾಗಿದೆ. ಮಾ.11 ರಂದು ಬರೆದಿದ್ದ ಡೆತ್‌ನೋಟ್ ಪತ್ತೆಯಾಗಿದ್ದು, ಅದರಿಂದ ಚೈತ್ರಾವತಿ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ. ಮತ್ತೂಂದೆಡೆ ಈ ಹಿಂದೆಯೂ ಆತ್ಮಹತ್ಯೆಗೆ ಯತ್ನಿಸಿದ್ದರಾ ಎಂಬ ಅನುಮಾನ ಮೂಡಿದೆ. ವೃತ್ತಿಯಲ್ಲಿ ಹೈಕೋರ್ಟ್ ವಕೀಲೆ ಯಾಗಿದ್ದ ಚೈತ್ರಾವತಿ, ಪ್ರವೃತ್ತಿಯಲ್ಲಿ ರೂಪದರ್ಶಿಯಾಗಿಯೂ ಗುರುತಿಸಿಕೊಂಡಿ ದ್ದರು. ಈ ವಿಚಾರ ವಾಗಿ ಕುಟುಂಬದಲ್ಲಿ ವೈಮ ನಸ್ಸು ಇತ್ತೆ ಎಂಬ ಬಗ್ಗೆಯೂ ಮಾಹಿತಿ ಸಂಗ್ರಹಿಸಬೇಕಿದೆ ಎಂದು ಪೊಲೀಸರು ಹೇಳಿದರು.
2 ತಿಂಗಳ ಹಳೆಯ ಡೆತ್‌ನೋಟ್ ಪತ್ತೆ: ಡಿಸಿಪಿ
ಚೈತ್ರಾರ ಮನೆಯಲ್ಲಿ ಮಾ.11ರಂದು ಬರೆದಿದ್ದ ಡೆತ್‌ನೋಟ್ ಪತ್ತೆಯಾಗಿದೆ. ಅದರಲ್ಲಿ ನನ್ನ ಸಾವಿಗೆ ಯಾರು ಕಾರಣರಲ್ಲ. ಒತ್ತಡ, ಮಾನಸಿಕ ಖನ್ನತೆ ಅಂತಾ ಬರೆದಿರುವುದು ಗೊತ್ತಾಗಿದೆ ಎಂದು ಉತ್ತರ ವಿಭಾಗದ ಡಿಸಿಪಿ ಸೈದುಲು ಅಡಾವತ್ ತಿಳಿಸಿದ್ದಾರೆ. ಅದನ್ನು ಅವರೇ ಬರೆದಿದ್ದಾರಾ ಅಥವಾ ಬೇರೆ ಯಾರಾದರೂ ಬರೆದಿದ್ದಾರೆಯೇ ಎಂಬ ಬಗ್ಗೆ ಪರಿಶೀಲಿಸಲಾಗುತ್ತಿದೆ. ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಾವಿನ ಕಾರಣ ತಿಳಿಯಲಿದೆ ಎಂದು ಹೇಳಿದರು.
ಸೂಕ್ತ ತನಿಖೆಗೆ ವಕೀಲರ ಸಂಘ ಆಗ್ರಹ: ಬ್ಯಾಡ್ಮಿಂಟನ್ ಆಟಗಾರ್ತಿ, ಹೈಕೋರ್ಟ್ ವಕೀಲೆಯಾಗಿದ್ದ ಚೈತ್ರಾವತಿ ಸಾವಿನ ಪ್ರಕರಣದ ತನಿಖೆಗೆ ಎಲ್ಲಾ ರೀತಿಯ ಕ್ರಮ ಕೈಗೊಂಡು ನ್ಯಾಯ ಒದಗಿಸಬೇಕು ಎಂದು ಬೆಂಗಳೂರು ವಕೀಲರ ಸಂಘ ಆಗ್ರಹಿಸಿದೆ. ಈ ಕುರಿತಂತೆ ಬೆಂಗಳೂರು ಪೊಲೀಸ್ ಆಯುಕ್ತರು ಮತ್ತು ಉತ್ತರ ವಿಭಾಗದ ಡಿಸಿಪಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ವಿವೇಕ ಸುಬ್ಟಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಟಿ.ಜಿ.ರವಿ ಹಾಗೂ ಖಜಾಂಚಿ ಎಂ.ಟಿ.ಹರೀಶ್, ಈ ಸಾವು ಇಡೀ ವಕೀಲ ವೃಂದಕ್ಕೆ ಆಘಾತವುಂಟು.
ಹೀಗಾಗಿ ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕೋರಿದ್ದಾರೆ. ಆಕೆಯ ಸ್ನೇಹಿತೆಯರಿಂದ ನಮಗೆ ತಿಳಿದು ಬಂದಿರುವಂತೆ ಚೈತ್ರಾ ಅತ್ಯಂತ ಧೈರ್ಯವಂತೆಯಾಗಿದ್ದರು. ಅವರು ಆತ್ಮಹತ್ಯೆ ಮಾಡಿಕೊಳ್ಳುವಂತಹ ಮಹಿಳೆ ಆಗಿರಲಿಲ್ಲ. ಹೀಗಾಗಿ ಸೂಕ್ತ ತನಿಖೆ ನಡೆಸಬೇಕು ಎಂದು ಸಂಘ ಒತ್ತಾಯಿಸಿದೆ.
ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ : ಡೆತ್ ನೋಟ್
ಮೃತ ಚೈತ್ರಾವತಿ ಬರೆದಿದ್ದಾರೆ ಎನ್ನಲಾದ ಡೆತ್‌ನೋಟ್‌ನಲ್ಲಿ, “ನನ್ನ ಪತಿ ತುಂಬಾ ಒಳ್ಳೆಯವರು, ನೀವೂ ಜೀವನವನ್ನು ಎಂಜಾಯ್ ಮಾಡಿ. ಮಗಳನ್ನು ಚೆನ್ನಾಗಿ ನೋಡಿಕೊಳ್ಳಿ. ನಾನು ಖನ್ನತೆಯಿಂದ ಬಳಲುತ್ತಿದ್ದೇನೆ. ಅದರಿಂದ ಹೊರ ಬರಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ನನ್ನ ಜೀವನವನ್ನು ಇಲ್ಲಿಗೆ ಕೊನೆಗೊಳಿಸುತ್ತಿದ್ದೇನೆ. ಆತ್ಮಹತ್ಯೆ ಮಾಡಿಕೊಳ್ಳುವುದು ತಪ್ಪು ಎಂದು ಗೊತ್ತಿದೆ. ಆದರೂ ಆತ್ಮಹತ್ಯೆಯನ್ನು ಮಾಡಿಕೊಂಡು ನನ್ನ ಜೀವನವನ್ನು ಕೊನೆಗೊಳಿಸುತ್ತಿದ್ದೇನೆ’ ಎಂದು ಉಲ್ಲೇಖಿಸಲಾಗಿದೆ. ಆದರೆ ಯಾವ ವಿಚಾರಕ್ಕೆ ಖನ್ನತೆಗೆ ಒಳಗಾಗಿದ್ದರು ಎಂಬುದು ತಿಳಿದು ಬಂದಿಲ್ಲ.