Advertisement

Crime: ಶೀಲ ಶಂಕಿಸಿ ಪತ್ನಿ ಕತ್ತು ಸೀಳಿಆತ್ಮಹತ್ಯೆಗೆ ಯತ್ನಿಸಿದ ಪತಿ

11:17 AM Nov 06, 2024 | Team Udayavani |

ಬೆಂಗಳೂರು: ಶೀಲ ಶಂಕಿಸಿ ಪತಿಯೇ ಪತ್ನಿಯನ್ನು ಸಾರ್ವಜನಿಕವಾಗಿ ಕೊಲೆಗೈದು, ಬಳಿಕ ತಾನೂ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಭೀಕರ ಘಟನೆ ಜೀವನ್‌ ಭೀಮಾನಗರ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

Advertisement

ಚೆಲ್ಲಘಟ್ಟ ನಿವಾಸಿ ಸಂಗೀತಾ(30) ಕೊಲೆಯಾದ ಮಹಿಳೆ. ನಾಗರಾಜ್‌ ಆತ್ಮಹತ್ಯೆಗೆ ಯತ್ನಿಸಿದವ.

ತರಕಾರಿ ವ್ಯಾಪಾರ ಮಾಡಿಕೊಂಡಿದ್ದ ಸಂಗೀತಾ, 6 ವರ್ಷಗಳ ಹಿಂದೆ ನಾಗರಾಜ್‌ ನನ್ನು ಮದುವೆಯಾಗಿದ್ದರು. ದಂಪತಿಗೆ ನಾಲ್ಕು ವರ್ಷದ ಮಗು ಕೂಡ ಇದೆ. ದಂಪತಿ ಮಂಗಳವಾರ ರಾತ್ರಿ ಕುಳ್ಳಪ್ಪ ಗಾರ್ಡನ್‌ನಲ್ಲಿರುವ ಸಂಬಂಧಿ ಮನೆಗೆ ಬಂದಿದ್ದು, ಈ ವೇಳೆ ಮದ್ಯದ ಅಮಲಿನಲ್ಲಿ ಆರೋಪಿ ನಾಗರಾಜ್‌, ಪತ್ನಿ ಜತೆ ಜಗಳ ನಡೆದಿದೆ. ಮಾತಿಗೆ ಮಾತು ಬೆಳೆದು ಕೋಪಗೊಂಡ ಪತಿ ತನ್ನ ಪತ್ನಿಯನ್ನು ಕೆಳಗೆ ತಳ್ಳಿ ಆಕೆಯ ಕತ್ತು ಕೊಯ್ದು ಕೊಲೆ ಮಾಡಿದ್ದಾನೆ. ಬಳಿಕ ಆತನೂ ತನ್ನ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಆತನು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದರು.

ಜೀವನ್‌ ಭೀಮಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next