ಬೆಂಗಳೂರು: ನೇಪಾಳ ಮೂಲದ 6 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದಲ್ಲದೆ, ಆಕೆಯನ್ನು ಉಸಿರುಗಟ್ಟಿಸಿ ಹತ್ಯೆಗೈದಿರುವ ದಾರುಣ ಘಟನೆ ರಾಮಮೂರ್ತಿನಗರದ ಹೊಯ್ಸಳ ನಗರದಲ್ಲಿ ನಡೆದಿದೆ.
ಇದೇ ವೇಳೆ ಕೃತ್ಯ ಎಸಗಿದ ಆರೋಪಿಯನ್ನು ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಿಹಾರ ಮೂಲದ ಅಭಿಷೇಕ್ (24) ಬಂಧಿತ ಆರೋಪಿ. ಈತ ಸೋಮವಾರ ಸಂಜೆ ನೇಪಾಳ ಮೂಲದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ದ್ದಾನೆ. ಬಳಿಕ ಆಕೆಯನ್ನು ಉಸಿರುಗಟ್ಟಿಸಿ ಹತ್ಯೆಗೈದಿದ್ದ. ಬಾಲಕಿಯ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿಯ ವಿರುದ್ಧ ಪೋಕ್ಸೋ ಹಾಗೂ ಕೊಲೆ ಪ್ರಕ ರಣ ದಾಖಲಿಸಿಕೊಂಡು ಬಂಧಿಸಿ, ನ್ಯಾಯಾಂಗ ಬಂಧ ನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.
ನೇಪಾಳ ಮೂಲದ ದಂಪತಿ 10 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. 6 ವರ್ಷಗಳಿಂದ ರಾಮಮೂರ್ತಿನಗರದ ಹೊಯ್ಸಳನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸಂತ್ರಸ್ತೆ ತಂದೆ ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡಿಕೊಂಡಿದ್ದು, ತಾಯಿಯೂ ಸಣ್ಣ-ಪುಟ್ಟ ಕೆಲಸಕ್ಕೆ ಹೋಗುತ್ತಾರೆ. ಬಾಲಕಿ ಮನೆಯಲ್ಲೇ ಒಬ್ಬಳೇ ಇರುತ್ತಿದ್ದಳು. ಈ ಮಧ್ಯೆ 5 ವರ್ಷಗಳ ಹಿಂದೆ ಬಿಹಾರದಿಂದ ಬೆಂಗಳೂರಿಗೆ ಬಂದಿರುವ ಆರೋಪಿ, ಮೂರು ದಿನಗಳ ಹಿಂದಷ್ಟೇ ರಾಮಮೂರ್ತಿನಗರದ ಹೊಯ್ಸಳ ನಗರದಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡಕ್ಕೆ ಗಾರೆ ಕೆಲಸಕ್ಕೆ ಸೇರಿಕೊಂಡಿದ್ದ ಎಂದು ಪೊಲೀಸರು ಹೇಳಿದರು.
ಪುಸಲಾಯಿಸಿ ಕರೆದೊಯ್ದು ಕೃತ್ಯ: ಸೋಮವಾರ ಸಂಜೆ ನೇಪಾಳ ಮೂಲದ ದಂಪತಿ ಕಾರ್ಯನಿಮಿತ್ತ ಹೊರಗಡೆ ಹೋಗಿದ್ದಾರೆ. ಆಗ ಬಾಲಕಿ ಮನೆ ಮುಂದೆ ಆಟವಾಡುತ್ತಿದ್ದಳು. ಅದೇ ವೇಳೆ ಆರೋಪಿ ಆಕೆ ಯನ್ನು ಪುಸಲಾಯಿಸಿ ಕರೆದಿದ್ದಾನೆ. ಹತ್ತಿರಕ್ಕೆ ಬಂದ ಬಾಲಕಿಯ ಬಾಯಿ ಮುಚ್ಚಿ ನಿರ್ಮಾಣ ಹಂತದ ಕಟ್ಟಡದ ಒಳಗೆ ಎಳೆದೊಯ್ದು, ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಬಳಿಕ ಈ ವಿಚಾರವನ್ನು ತನ್ನ ಪೋಷಕರಿಗೆ ತಿಳಿಸುವ ಭಯದಲ್ಲಿ ಆಕೆಯ ಉಸಿರುಗಟ್ಟಿಸಿ ಹತ್ಯೆಗೈದು, ಮದ್ಯದ ಅಮಲಿನಲ್ಲೇ ಅಲ್ಲಿಯೇ ಮಲಗಿದ್ದ.
ಮತ್ತೂಂದೆಡೆ ಹೊರಗಡೆ ಹೋಗಿದ್ದ ಪೋಷಕರು, ಮನೆ ಬಳಿ ಬಂದಾಗ ಮಗಳು ಕಾಣದಕ್ಕೆ ಗಾಬರಿ ಗೊಂಡು ಎಲ್ಲೆಡೆ ಹುಡುಕಾಟ ನಡೆಸಿದ್ದಾರೆ. ಎಲ್ಲಿಯೂ ಪತ್ತೆಯಾಗಿಲ್ಲ. ಬಳಿಕ ನಿರ್ಮಾಣ ಹಂತದ ಕಟ್ಟಡದ ಒಳಗೆ ಹೋಗಿ ನೋಡಿದಾಗ ಬಾಲಕಿಯ ಶವ ಪತ್ತೆ ಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಸಾರ್ವಜನಿಕರಿಂದ ಆರೋಪಿಗೆ ಥಳಿತ, ಭಾರೀ ಪ್ರತಿಭಟನೆ:
ಇನ್ನು ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ನೇಪಾಳ ಮೂಲದ ಇತರೆ ನಿವಾಸಿಗಳು ಹಾಗೂ ಸ್ಥಳೀಯರು ಆರೋಪಿಗೆ ಹಿಗ್ಗಾ ಮುಗ್ಗಾ ಥಳಿಸಿದ್ದಾರೆ. ಈ ವಿಚಾರ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ದೌಡಾಯಿಸಿ ಸಾರ್ವಜ ನಿಕರಿಂದ ಆರೋಪಿಯನ್ನು ಬಿಡಿಸಿ ಠಾಣೆಗೆ ಕರೆದೊಯ್ದಿದ್ದಾರೆ. ನಂತರ ಬಾಲಕಿ ತಂದೆಯಿಂದ ದೂರು ಸ್ವೀಕರಿಸಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸ ಲಾಗಿದೆ ಎಂದು ಪೊಲೀಸರು ತಿಳಿಸಿದರು. ಮಗುವಿನ ಮೇಲಿನ ದೌರ್ಜನ್ಯಕ್ಕೆ ಸ್ಥಳೀಯರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಮ ಮೂರ್ತಿನಗರ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿ ಆರೋಪಿಯನ್ನು ತಮಗೆ ಒಪ್ಪಿಸುವಂತೆ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಬಳಿಕ ಮನವೊಲಿ
ಸಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಲಘು ಲಾಠಿ ಪ್ರಹಾರ ನಡೆಸಿ ಗುಂಪು ಚದುರಿಸಲಾಯಿತು. ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು ಎಂದು ಪೊಲೀಸರು ಹೇಳಿದರು.