ಬೆಂಗಳೂರು: ದೆಹಲಿ ಮೂಲದ ನೇಲ್ ಆರ್ಟಿಸ್ಟ್ವೊಬ್ಬಳು ಮನೆಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ದೆಹಲಿ ಮೂಲದ ಸೋನಿಯಾ (24) ಆತ್ಮಹತ್ಯೆ ಮಾಡಿಕೊಂಡವರು.
ನ.26ರಂದು ಬಾಗಲಗುಂಟೆಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದೆಹಲಿ ಮೂಲದ ಸೋನಿಯಾ ಒಂದೂ ವರೆ ತಿಂಗಳ ಹಿಂದೆಯಷ್ಟೇ ನಗರಕ್ಕೆ ಬಂದಿದ್ದು, ಸ್ಪಾವೊಂದರಲ್ಲಿ ನೈಲ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು.
ಬಾಗಲಗುಂಟೆಯ ಬಾಡಿಗೆ ಮನೆಯಲ್ಲಿ ಒಂಟಿಯಾಗಿ ವಾಸವಾಗಿದ್ದರು. ಮಂಗಳವಾರ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಪಾ ಕೆಲಸಕ್ಕೆ ಹಾಜರಾಗದ ಹಿನ್ನೆಲೆಯಲ್ಲಿ ಸ್ಪಾ ಮಾಲಿಕರು ಸೋನಿಯಾ ಮೊಬೈಲ್ಗೆ ಕರೆ ಮಾಡಿದ್ದಾರೆ.
ಆದರೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಅನುಮಾನಗೊಂಡು ಸ್ಪಾ ಸಿಬ್ಬಂದಿ ಮನೆ ಬಳಿ ಬಂದು ನೋಡಿದಾಗ, ಮನೆ ಯ ಬಾಗಿಲು ಒಳಗಿನಿಂದ ಲಾಕ್ ಆಗಿರುವುದು ಕಂಡು ಬಂದಿದೆ. ಬಳಿಕ ಬಾಗಿಲು ಲಾಕ್ ಮುರಿದು ಒಳಗೆ ಹೋಗಿ ನೋಡಿದಾಗ ಸೋನಿ ಯಾ ಆತ್ಮಹತ್ಯೆ ಘಟನೆ ಬೆಳಕಿಗೆ ಬಂದಿದೆ.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಸೋನಿಯಾ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳದಲ್ಲಿ ಯಾವುದೇ ಡೆತ್ನೋಟ್ ಸಿಕ್ಕಿಲ್ಲ. ದೆಹಲಿಯಲ್ಲಿರುವ ಆಕೆಯ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.