ಬೆಂಗಳೂರು: ಮಹಿಳೆಯರ ಸರ ಕಳವು ಹಾಗೂ ದ್ವಿಚಕ್ರ ವಾಹನ ಕಳವು ಮಾಡುತ್ತಿದ್ದ ಕಳ್ಳನನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡು ಕೃಷ್ಣಗಿರಿ ಮೂಲದ ರಮೇಶ್ ಅಲಿಯಾಸ್ ರಾಮು(24) ಬಂಧಿತ.
ಆರೋಪಿಯಿಂದ 10 ಲಕ್ಷ ರೂ. ಮೌಲ್ಯದ 6 ಗ್ರಾಂ ತೂಕದ ಚಿನ್ನದ ಸರ, ನಾಲ್ಕು ದ್ವಿಚಕ್ರ ವಾಹನ ಹಾಗೂ ಒಂದು ಆಟೋರಿಕ್ಷಾ ಜಪ್ತಿ ಮಾಡಲಾಗಿದೆ. ಈತ ಡಿಪ್ಲೊಮಾ ಮೆಕ್ಯಾನಿಕಲ್ ಎಂಜಿನಿಯರಿಂಗ್ ವ್ಯಾಸಂಗ ಮಾಡಿರುವ ಆರೋಪಿ, ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ. ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ 28 ಅಪರಾಧ ಪ್ರಕರಣಗಳು ದಾಖಲಾಗಿವೆ.
ತಲಘಟ್ಟಪುರದ ಮನವರ್ತೆ ಕಾವಲ್ ಶೋಭಾ ಹಿಲ್ ವ್ಯೂ ಅಪಾರ್ಟ್ಮೆಂಟ್ ನಿವಾಸಿ ಸುವರ್ಣ ಎಂಬುವರು ಆ.27ರಂದು ಸಂಜೆ ಕಲ್ಯಾಣ ಮಂಟಪದ ಎದುರಿನ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ, ದ್ವಿಚಕ್ರ ವಾಹನದಲ್ಲಿ ಬಂದ ಆಕೆಯ ಮಾಂಗಲ್ಯ ಸರ ಕಿತ್ತುಕೊಂಡು ಪರಾರಿಯಾಗಿದ್ದ.
ಆಗ ಘಟನಾ ಸ್ಥಳದ ಸಮುತ್ತಲ ಸಿಸಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ ವೇಳೆ ಆರೋಪಿ ಸುಳಿವು ಸಿಕ್ಕಿದೆ. ಈ ಸುಳಿವು ಆಧರಿಸಿ ಆರೋಪಿಯ ಪತ್ತೆಗೆ ಪೊಲೀಸರು ಶೋಧಿಸಿದಾಗ ಸೆ.5ರಂದು ಅಂಚೆಪಾಳ್ಯದ ಬೃಂದಾವನ ಲೇಔಟ್ನಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಸರಗಳವು ಬಗ್ಗೆ ತಪ್ಪೊಪ್ಪಿಕೊಂಡಿದ್ಧಾನೆ. ಆರೋಪಿ ರಮೇಶ್ ಅಪರಾಧ ಹಿನ್ನೆಲೆವುಳ್ಳವ ನಾಗಿದ್ದಾನೆ. ಡಿಪ್ಲೊಮಾ ಮೆಕ್ಯಾನಿಕಲ್ ಎಂಜಿನಿಯ ರಿಂಗ್ ವ್ಯಾಸಂಗ ಮಾಡಿರುವ ಆರೋಪಿ, ಡೆಲಿವರಿ ಬಾಯ್ ಕೆಲಸ ಮಾಡುತ್ತಿದ್ದ. ಮೋಜು-ಮಸ್ತಿಗೆ ಸುಲಭವಾಗಿ ಹಣ ಗಳಿಸುವ ಉದ್ದೇಶದಿಂದ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದಾನೆ.