Advertisement
ಮತ್ತೂಂದೆಡೆ ರಾಗಿಣಿ ಮತ್ತಿತರ ಆರೋಪಿಗಳ ಜತೆ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಕೇರಳ ಮೂಲದ ನಿಯಾಜ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈಗಾಗಲೇ ಬಂಧನಕ್ಕೊಳಗಾಗಿರುವ ಲೂಮ್ ಪೆಪ್ಪರ್ ಸಾಂಬಾ ಜತೆ ರಾಗಿಣಿ ಹಣಕಾಸಿನ ವ್ಯವಹಾರ ನಡೆಸಿರುವುದು ಗೊತ್ತಾಗಿದೆ. ಆಕೆಯ ಬ್ಯಾಂಕ್ ಖಾತೆ ವಿವರ ಮತ್ತು ವಾಟ್ಸ್‌ಆ್ಯಪ್‌ನಲ್ಲಿ ಕೆಲವು ಮಾಹಿತಿ ಸಿಕ್ಕಿವೆ ಎಂದು ಮೂಲಗಳು ತಿಳಿಸಿವೆ.
Related Articles
ಮಾದಕ ವಸ್ತು ದಂಧೆ ಬಗ್ಗೆ ಸ್ಫೋಟಕ ಮಾಹಿತಿಗಳು ಹೊರಬೀಳುತ್ತಿರುವ ನಡುವೆಯೇ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ನಾಲ್ಕೈದು ದಿನಗಳಲ್ಲಿ 28 ಮಂದಿಯನ್ನು ಬಂಧಿಸಿ, 2 ಕೋಟಿ ರೂ.ಗೂ ಅಧಿಕ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ
ಪೊಲೀಸರ ಕಾರ್ಯಾಚರಣೆಯಲ್ಲಿ ಡಾರ್ಕ್‌ವೆಬ್ ಸೈಟ್ ಮೂಲಕ ಐಷಾರಾಮಿ ಮಾದಕ ವಸ್ತುಗಳನ್ನು ಖರೀದಿಸಿ ನಗರದಲ್ಲಿ ಮಾರಾಟ ಮಾಡು ತ್ತಿದ್ದ 28 ಮಂದಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
Advertisement
ವಶಕ್ಕೆ ಪಡೆದ ಮಾದಕ ವಸ್ತುಗಳ ಪೈಕಿ ಎಂಡಿಎಂಎ, ಎಲ್‌ಎಸ್‌ಡಿ, ಗಾಂಜಾ, ಕೋಕೇನ್, ಬ್ರೌನ್ ಶುಗರ್, ಕ್ರಿಸ್ಟಲ್, ಹೈಡ್ರೋ ಗಾಂಜಾ ಸೇರಿವೆ. ಆರೋಪಿಗಳ ಪೈಕಿ ವಿದೇಶಿಯರು, ನೆರೆ ರಾಜ್ಯದವರು, ವಿದ್ಯಾರ್ಥಿಗಳು ಇದ್ದಾರೆ. ಇವರಲ್ಲಿ ಕೆಲವರು ವ್ಯಸನಿಗಳಾಗಿದ್ದು, ಪೆಡ್ಲರ್‌ಗಳಾಗಿ ಬದಲಾಗಿದ್ದಾರೆ. ವಿದ್ಯಾರ್ಥಿಗಳು, ಐಟಿ- ಬಿಟಿ ಉದ್ಯೋಗಿಗಳು, ಯುವ ಸಮೂಹವನ್ನು ಗುರಿಯಾಗಿಸಿಕೊಂಡು ದಂಧೆ ನಡೆಸುತ್ತಿದ್ದರು ಎಂದು ತಿಳಿಸಿದ್ದಾರೆ.