Advertisement
ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ಬಿಷಪ್ ಕಾಟನ್ ಬಾಲಕ ಹಾಗೂ ಬಾಲಕಿಯರ ಶಾಲೆಗೆ ಗುರುವಾರ ಶೇಖರ್ ವೆಂಕಟರಾಮನ್ ಎಂಬ ಹೆಸರಿನ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಮುಂಜಾನೆ 6.30ರ ಸುಮಾರಿಗೆ ಶಾಲೆಯ ವೆಬ್ಸೈಟ್ ಹಾಗೂ ಇ-ಮೇಲ್ಗೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದರು. ಸಂಜೆ 4 ಗಂಟೆ ಸುಮಾರಿಗೆ ಇ-ಮೇಲ್ ಪರಿಶೀಲನೆ ನಡೆಸುತ್ತಿದ್ದ ವೇಳೆ ಆಡಳಿತ ಮಂಡಳಿಯ ಗಮನಕ್ಕೆ ಬಂದಿದೆ. ಕೂಡಲೇ ಶಾಲಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಬಾಂಬ್ ನಿಷ್ಕ್ರಿಯ ದಳ, ಬಾಂಬ್ ತಪಾಸಣೆ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ, ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಶಾಲಾ ಆವರಣದಲ್ಲಿ ಪರಿಶೀಲಿಸಿದ್ದಾರೆ.
Advertisement
Bengaluru: ಬಿಷಪ್ ಕಾಟನ್ ಶಾಲೆಗಳಿಗೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್: ಆತಂಕ
01:04 PM Nov 08, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.