Advertisement

Bengaluru: ಬಿಷಪ್‌ ಕಾಟನ್‌ ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಇ-ಮೇಲ್‌: ಆತಂಕ

01:04 PM Nov 08, 2024 | Team Udayavani |

ಬೆಂಗಳೂರು: ಶಾಲಾ-ಕಾಲೇಜುಗಳಿಗೆ ಹುಸಿ ಬಾಂಬ್‌ ಬೆದರಿಕೆ ಸಂದೇಶಗಳು ಮತ್ತೆ ಮುಂದುವರಿದೆ. ನಗರದ ಪ್ರತಿಷ್ಠಿತ ಶಾಲೆಯೊಂದಕ್ಕೆ ಕಿಡಿಗೇಡಿಗಳು ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿ ಆತಂಕ ಸೃಷ್ಟಿಸಿದ್ದಾರೆ.

Advertisement

ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ಬಿಷಪ್‌ ಕಾಟನ್‌ ಬಾಲಕ ಹಾಗೂ ಬಾಲಕಿಯರ ಶಾಲೆಗೆ ಗುರುವಾರ ಶೇಖರ್‌ ವೆಂಕಟರಾಮನ್‌ ಎಂಬ ಹೆಸರಿನ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆ ಸಂದೇಶ ಬಂದಿದೆ. ಮುಂಜಾನೆ 6.30ರ ಸುಮಾರಿಗೆ ಶಾಲೆಯ ವೆಬ್‌ಸೈಟ್‌ ಹಾಗೂ ಇ-ಮೇಲ್‌ಗೆ ಕಿಡಿಗೇಡಿಗಳು ಬಾಂಬ್‌ ಬೆದರಿಕೆ ಸಂದೇಶ ಕಳುಹಿಸಿದ್ದರು. ಸಂಜೆ 4 ಗಂಟೆ ಸುಮಾರಿಗೆ ಇ-ಮೇಲ್‌ ಪರಿಶೀಲನೆ ನಡೆಸುತ್ತಿದ್ದ ವೇಳೆ ಆಡಳಿತ ಮಂಡಳಿಯ ಗಮನಕ್ಕೆ ಬಂದಿದೆ. ಕೂಡಲೇ ಶಾಲಾ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದ ಬಾಂಬ್‌ ನಿಷ್ಕ್ರಿಯ ದಳ, ಬಾಂಬ್‌ ತಪಾಸಣೆ ದಳ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ, ಕಬ್ಬನ್‌ ಪಾರ್ಕ್‌ ಠಾಣೆ ಪೊಲೀಸರು ಶಾಲಾ ಆವರಣದಲ್ಲಿ ಪರಿಶೀಲಿಸಿದ್ದಾರೆ.

ಈ ವೇಳೆ ಶಾಲಾ ಆವರಣದಲ್ಲಿ ಯಾವುದೇ ಸ್ಫೋಟಕ ವಸ್ತುಗಳಾಗಲಿ, ರಾಸಾಯನಿಕ ಪದಾರ್ಥ ಗಳಾಗಲಿ ಪತ್ತೆ ಆಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್‌ ಬೆದರಿಕೆ ಸಂದೇಶ ಎಂಬುದು ದೃಢವಾಯಿತು ಎಂದು ಪೊಲೀಸರು ಮಾಹಿತಿ ನೀಡಿದರು.

ಈ ಹಿಂದೆ ಹನುಮಂತ ನಗರ, ಸದಾಶಿವನಗರ, ವಿ.ವಿ ಪುರ ಪೊಲೀಸ್‌ ಠಾಣಾ ವ್ಯಾಪ್ತಿಯ 3 ಎಂಜಿನಿಯರಿಂಗ್‌ ಕಾಲೇಜುಗಳ ಇ-ಮೇಲ್‌ಗ‌ೂ ಹುಸಿ ಬಾಂಬ್‌ ಬೆದರಿಕೆ ಸಂದೇಶ ಬಂದಿತ್ತು

Advertisement

Udayavani is now on Telegram. Click here to join our channel and stay updated with the latest news.

Next