Advertisement

ಧಾರಾಕಾರ ಮಳೆಗೆ ಬೆಂಗಳೂರು ನಗರದ ಹಲವು ಪ್ರದೇಶಗಳು ಜಲಾವೃತ

12:56 PM Nov 22, 2021 | Team Udayavani |

ಬೆಂಗಳೂರು: ಭಾನುವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಂಗಳೂರಿನ ಹಲವು ಭಾಗಗಳು ಜಲಾವೃತಗೊಂಡಿದ್ದು, ಹಲವೆಡೆ ಸಂಚಾರ ಅಸ್ತವ್ಯಸ್ತಗೊಂಡಿದೆ.

Advertisement

ಜಲಾವೃತಗೊಂಡ ಮಾನ್ಯತಾ ಟೆಕ್ ಪಾರ್ಕ್ ಮತ್ತು ಕೇಂದ್ರೀಯ ವಿಹಾರ್ ಅಪಾರ್ಟ್ ಮೆಂಟ್ ಬಳಿ , ಆರ್.ಆರ್.ನಗರ, ದಾಸರಹಳ್ಳಿ, ಮಹದೇವಪುರ ವಲಯದ ಹಲವು ವಾರ್ಡ್‌ಗಳಲ್ಲೂ ಭಾರಿ ಮಳೆಯಾಗಿದ್ದು, ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತಗೊಂಡಿವೆ.

ಜಲಾವೃತ ಪ್ರದೇಶದ ಕಚೇರಿ ಕಟ್ಟಡಗಳಿಗೆ ವಾಹನಗಳು ಬರಲು ಸಾಧ್ಯವಾಗದ ಕಾರಣ ಕೆಲ ನೌಕರರನ್ನು ವಾಪಸ್ ಕಳುಹಿಸಲಾದ ಘಟನೆಯೂ ನಡೆದಿದೆ.

ಯಲಹಂಕ ಭಾಗದಲ್ಲಿ ಭಾರಿ ಮಳೆ ಸುರಿದಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ : ರಾಜಧಾನಿಯಲ್ಲಿ ವರುಣನ ಆರ್ಭಟ

Advertisement

ಸುರಭಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಯಲಹಂಕ ವಲಯದ ಜಂಟಿ ಆಯುಕ್ತರು ತಿಳಿಸಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ಅವರು ಭಾನುವಾರ ರಾತ್ರಿ ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಮಳೆಯಿಂದ ಆಗಿರುವ ಹಾನಿ ಮತ್ತು ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಪರಿಶೀಲನೆ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next